Share

e

ಮಧ್ಯರಾತ್ರಿ ಸಜ್ಜನರ ಮನೆಗೆ ನುಗ್ಗಿ ಸೆಲ್ಫಿ ತೆಗೆದ ಪೊಲೀಸರ ವಿಚಿತ್ರ ಪ್ರಕರಣ‌ ಮತ್ತೊಂದು ಮಗ್ಗಲು ಪಡೆದುಕೊಂಡಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಹತ್ಯೆಗಳು ನಡೆದ ಬಳಿಕ ಸರ್ಕಾರ ಕಟ್ಟುನಿಟ್ಟಿನ ಕ್ರಮವಾಗಿ ಎಸ್ಪಿ ಪೊಲೀಸ್ ಕಮಿಷನರನ್ನ ಬದಲಾಯಿಸಿ #ದಕ್ಷ ಅಧಿಕಾರಿಗಳನ್ನು ನೇಮಿಸಿ ಆದೇಶ ಹೊರಡಿಸಿತ್ತು.
ಬಳಿಕ ದಕ್ಷಿಣ ಕನ್ನಡ ಜಿಲ್ಲೆಗೆ ಎಸ್ಪಿ ಯಾಗಿ ಬಂದ #ಅರುಣ್_ಕುಮಾರ್ ಅವರು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಂಡಿದ್ದರು.
ಆದರೆ ಪೊಲೀಸರು ರಾಷ್ಟ್ರೀಯ ಸ್ವಯಂಸೇವಕ ಸಂಘದ ವಯೋವೃದ್ದ ರ ಮನೆಗಳಿಗೆ ಅವರು  ತಂಗಿದ್ದ ಸ್ಥಳಗಳಿಗೆ ಮಧ್ಯರಾತ್ರಿ ತೆರಳಿ ಅವರ ಜೊತೆ ಪೊಲೀಸರು ಸೆಲ್ಫಿ ತೆಗೆದುಕೊಂಡಿದ್ದರು.  ಪ್ರಶ್ನಿಸಿದಾಗ ಪೊಲೀಸ್ ಹಿರಿಯ ಅಧಿಕಾರಿಗಳ ಆದೇಶ ಎಂದು ಉತ್ತರಿಸಿದ್ದರು.
ಕಿರುಕುಳಕ್ಕೆ ಒಳಗಾದ ಯು.ಜಿ. #ರಾಧಾ ಭಟ್
ವ್ಯಕ್ತಿ ಸ್ವಾತಂತ್ರ್ಯದ ಮೂಲಭೂತ ಹಕ್ಕನ್ನು ಪೊಲೀಸರು ವಿನಾ ಕಾರಣ ಕಸಿದಿದ್ದಾರೆ ಎಂದು ಹೈಕೋರ್ಟ್ ಮೊರೆ ಹೋಗಿದ್ದರು.
ಆರೋಪಿಯ ರೀತಿ ನನ್ನನ್ನು ಪೊಲೀಸರು ನಡೆಸಿಕೊಂಡಿದ್ದು, ಇದರಿಂದ ನನ್ನ ಖಾಸಗಿತನ, ಚಾರಿತ್ರ್ಯಕ್ಕೆ ಧಕ್ಕೆಯಾಗಿದೆ. ಈ ಮೂಲಕ ನನಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಲಾಗಿದೆ. ಹೀಗಾಗಿ ನನಗೆ 20 ಲಕ್ಷ ರೂ. ಮಾನನಷ್ಟ ಪರಿಹಾರ ನೀಡುವಂತೆ ನಿರ್ದೇಶಿಸಬೇಕು ಎಂದು ಹೈಕೋರ್ಟ್‌ಗೆ ಮನವಿ ಮಾಡಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನಿಲ್‌ ದತ್ ಯಾದವ್ ಅವರ ಏಕಸದಸ್ಯ ಪೀಠ, ದಕ್ಷಿಣ ಕನ್ನಡ ಜಿಲ್ಲಾ ಎಸ್​​ಪಿಗೆ ನೋಟಿಸ್ ನೀಡಿದೆ. ದೂರುದಾರರ ಪರವಾಗಿ ನ್ಯಾಯವಾದಿ Aruna Shyam  ವಾದಿಸಿದ್ದರು.
ಯು.ಜಿ.ರಾಧಾ ಅವರು ರಾಜ್ಯ ಪೊಲೀಸ್ ದೂರು ಪ್ರಾಧಿಕಾರ ಹಾಗೂ ರಾಷ್ಟ್ರೀಯ ಮಾನವ ಹಕ್ಕು ಆಯೋಗಕ್ಕೆ ಪ್ರತ್ಯೇಕ ದೂರು ನೀಡಿದ್ದಾರೆ. ಈಗಾಗಲೇ ರಾಷ್ಟ್ರೀಯ ಮಾನವ ಹಕ್ಕು ಆಯೋಗ ಹಾಗೂ ರಾಜ್ಯ ಪೊಲೀಸ್ ದೂರು ಪ್ರಾಧಿಕಾರ ಜಿಲ್ಲಾ ಎಸ್​​​ಪಿಗೆ ನೋಟಿಸ್‌ ಜಾರಿ ಮಾಡಿದೆ. ಬೇರೆ ಬೇರೆ ದೂರುಗಳ ಆಧಾರದಲ್ಲಿ ನೊಟೀಸ್ ನೀಡಲಾಗಿದೆ.
ದಕ್ಷಿಣಕನ್ನಡ ಜಿಲ್ಲಾ ಎಸ್ಪಿ ಗೆ ನೋಟಿಸ್!
Click to comment

Leave a Reply

Your email address will not be published. Required fields are marked *

To Top