ರೆಡ್‌ಕ್ರಾಸ್ ಸಮಿತಿಯಿಂದ ಜಿಲ್ಲಾಧಿಕಾರಿ ಭೇಟಿ
ಮಂಗಳೂರು :ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಆಡಳಿತ ಸಮಿತಿ ಸದಸ್ಯರು ದ.ಕ. ಜಿಲ್ಲಾಧಿಕಾರಿ ದರ್ಶನ್ .ಎಚ್.ವಿ ಅವರನ್ನು ಭೇಟಿಯಾಗಿ ಸ್ವಾಗತಿಸಿದರು. ಜಿಲ್ಲಾ ರೆಡ್‌ಕ್ರಾಸ್ ಹಮ್ಮಿಕೊಂಡಿರುವ ಸೇವಾ ಕಾರ್ಯ ಹಾಗೂ ಹಳೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ 6 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣಗೊಂಡಿರುವ ರೆಡ್‌ಕ್ರಾಸ್ ಶತಮಾನೋತ್ಸವ ಕಟ್ಟಡ ಉದ್ಘಾಟನೆಗೆ ಸಿದ್ಧವಾಗಿರುವ ಬಗ್ಗೆ ಸಮಿತಿ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅವರು ನೂತನ ಜಿಲ್ಲಾಧಿಕಾರಿ ಅವರಿಗೆ ವಿವರ ನೀಡಿದರು.
ಶೀಘ್ರದಲ್ಲೇ ಕಟ್ಟಡ ವೀಕ್ಷಿಸಲು ಆಗಮಿಸುವುದಾಗಿ ಜಿಲ್ಲಾಧಿಕಾರಿ ಅವರು ತಿಳಿಸಿದರು.
ಜಿಲ್ಲಾ ರೆಡ್‌ಕ್ರಾಸ್‌ನ ಉಪಾಧ್ಯಕ್ಷ ಡಾ.ಸತೀಶ್ ರಾವ್,ಕಾರ್ಯದರ್ಶಿ ಕಿಶೋರ್‌ಚಂದ್ರ ಹೆಗ್ಡೆ, ನಿರ್ದೇಶಕರಾದ ಡಾ.ಸಚ್ಚಿದಾನಂದ ರೈ, ಗುರುದತ್ ನಾಯಕ್, ಪಿ.ಬಿ.ಹರೀಶ್ ರೈ ಉಪಸ್ಥಿತರಿದ್ದರು.
