DAKSHINA KANNADA

ಜಿಲ್ಲೆಯಲ್ಲಿ ಕ್ಯಾನ್ಸರ್ ಮತ್ತು ಹೃದ್ರೋಗ ಸರಕಾರಿ ಆಸ್ಪತ್ರೆ : ಸಿ.ಎಂ ಗೆ ಉಸ್ತುವಾರಿ ಸಚಿವರ ಮನವಿ

Share
  • ಜಿಲ್ಲೆಯಲ್ಲಿ ಕ್ಯಾನ್ಸರ್ ಮತ್ತು ಹೃದ್ರೋಗ ಸರಕಾರಿ ಆಸ್ಪತ್ರೆ : ಸಿ.ಎಂ ಗೆ ಉಸ್ತುವಾರಿ ಸಚಿವರ ಮನವಿ
    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಅಸಾಂಕ್ರಾಮಿಕ ರೋಗಗಳಾದ ಕ್ಯಾನ್ಸರ್ ಮತ್ತು ಹೃದಯ ಸಂಬಂಧಿ ರೋಗಗಳ ಸಂಖ್ಯೆ ಹೆಚ್ಚುತ್ತಿದ್ದು, ಉಸ್ತುವಾರಿ ಸಚಿವರು ಜಿಲ್ಲೆಗೆ ಭೇಟಿ ನೀಡುತ್ತಿರುವ ಸಂದರ್ಭಗಳಲ್ಲಿ ಕ್ಯಾನ್ಸರ್ ಮತ್ತು ಹೃದಯ ಸಂಬಂಧಿ ರೋಗಗಳ ಅಗತ್ಯ ಚಿಕಿತ್ಸೆಗೆ ಪ್ರತ್ಯೇಕವಾಗಿ ಸರ್ಕಾರಿ ಆಸ್ಪತ್ರೆಗಳನ್ನು ಪ್ರಾರಂಭಿಸಲು ಸಾರ್ವಜನಿಕರು ಮನವಿ ಮಾಡಿದ್ದಾರೆ.
    ಜನರು ಮತ್ತು ಜನಪ್ರತಿನಿಧಿಗಳು ಮನವಿ ಮಾಡಿದ ಹಿನ್ನೆಲೆಯಲ್ಲಿ ಮಂಗಳೂರು ನಗರದ ಹೊರ ವಲಯದ ಮೂಡುಶೆಡ್ಡೆಯ ಕ್ಷಯರೋಗಗಳ ಆಸ್ಪತ್ರೆಯ ಆವರಣದಲ್ಲಿ ಲಭ್ಯವಿರುವ ಜಾಗದಲ್ಲಿ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಮತ್ತು ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆಗಳ ಒಂದೊಂದು ಘಟಕಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮುಖ್ಯಮಂತ್ರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.
To Top