LATEST NEWS

ನಿವೃತ್ತ ಬ್ಯಾಂಕ್ ಉದ್ಯೋಗಿ ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್ ನಲ್ಲೇ ಆತ್ಮಹತ್ಯೆಗೆ ಶರಣು

Posted on

Share

dfg

ಮಂಗಳೂರು: ಬ್ಯಾಂಕ್ ನ ನಿವೃತ್ತ ಉದ್ಯೋಗಿಯೊಬ್ಬರು ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್ ನಲ್ಲೇ ಆತ್ಮಹತ್ಯೆಗೆ ಶರಣಾದ ಘಟನೆ  ಮಂಗಳೂರಿನ ರಾಮಭವನ ಕಾಂಪ್ಲೆಕ್ಸ್ ನ ನೆಲ ಮಹಡಿಯ ಕೆನರಾ ಬ್ಯಾಂಕ್ ನ ಸ್ಟೋರ್ ರೂಮ್ ನಲ್ಲಿ ನಡೆದಿದೆಫ್ಯಾಶನ್ ಬಟ್ಟೆಗಳು
ಮೃತರನ್ನು ಅಳಕೆ ನಿವಾಸಿ ಗಿರಿದರ್ ಯಾದವ್ (61) ಎಂದು ಗುರುತಿಸಲಾಗಿದೆ. ಇವರು ಕೊಡಿಯಾಲ್ ಬೈಲ್ ಕೆನರಾ ಬ್ಯಾಂಕ್ ನಲ್ಲಿ ಸುಮಾರು 40 ವರ್ಷಗಳ ಕಾಲ ಅಟೆಂಡರ್ ಆಗಿ ಕಾರ್ಯನಿರ್ವಹಿಸಿದ್ದರು. ಇತ್ತೀಚೆಗೆ ನಿವೃತ್ತಿ ಹೊಂದಿದ್ದರು.  ಬ್ಯಾಂಕ್ ನ ಮೇಲಿನ ಪ್ರೀತಿಗೆ ಪ್ರತಿದಿನ ಬ್ಯಾಂಕ್ ಗೆ ಬಂದು ಹೋಗುತ್ತಿದ್ದರು ಎಂದು ಹೇಳಲಾಗಿದೆ. ಅದೇ ರೀತಿ ನಿನ್ನೆ ಬ್ಯಾಂಕ್ ಗೆ ಬಂದವರು ಮತ್ತೆ ಮನೆಗೆ ಹಿಂದಿರುಗಿರಲ್ಲಿಲ್ಲ. ಈ ಹಿನ್ನಲೆ ಗಿರಿದರ್ ಅವರ ಪತ್ನಿ ಬಂದರ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಕುರಿತಂತೆ ದೂರು ದಾಖಲಿಸಿದ್ದರು ಎಂದು ಹೇಳಲಾಗಿದೆ.
 ಬೆಳಿಗ್ಗೆ ಬ್ಯಾಂಕ್ ಬಾಗಿಲು ತೆರೆದಾಗ ಬ್ಯಾಂಕ್ ನ ಸ್ಟೋರ್ ರೂಂ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಸ್ಥಿತಿಯಲ್ಲಿಗಿರಿಧರ್ ಅವರು ಕಂಡು ಬಂದಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಗಿರಿಧರ್ ಯಾದವ್ ಅವರು ರಾಜ್ಯಮಟ್ಟದ ಪವರ್ ಲಿಪ್ಟರ್ ಆಗಿದ್ದು, ಹಲವಾರು ಪದಕಗಳನ್ನು ಗಳಿಸಿದ್ದಾರೆ. ಅವರಿಗೆ ಆರೋಗ್ಯದ ಸಮಸ್ಯೆ ಇತ್ತು ಎಂದು ಹೇಳಲಾಗಿದೆ.

Leave a Reply

Your email address will not be published. Required fields are marked *

Most Popular

Exit mobile version