CRIME NEWS

ಹೆತ್ತು ಹೊತ್ತು ಸಲಹಿದ ತಾಯಿಯನ್ನೇ ಬೆಂಕಿ ಹಚ್ಚಿ ಕೊಲೆಗೈದ ದುಷ್ಟ ಪುತ್ರ ಉಡುಪಿಯಲ್ಲಿ ಬಂಧನ

Posted on

Share

 

ಮಂಗಳೂರು-ಕಾಸರಗೋಡು ಮದ್ಯೆ ಇರೋ ಮಂಜೇಶ್ವರದ ವರ್ಕಾಡಿ ನಿವಾಸಿ ಮೆಲ್ವಿನ್ ಮೊಂತೇರೊ ತಾಯಿಯನ್ನ ಕೊಂದ ಮಗ.
 ಕೇರಳದ ಕಾಸರಗೋಡು ಜಿಲ್ಲೆಯ ವರ್ಕಾಡಿಯಲ್ಲಿ ಈತ ತನ್ನ ತಾಯಿ 60 ವರ್ಷದ ಹಿಲ್ಡಾ ಜೊತೆ ಈ ಮನೆಯಲ್ಲಿ ವಾಸವಿದ್ದ. ತಂದೆ ಲೂಯಿಸ್ ಮೊಂತೇರೋ ತೀರಿಹೋಗಿದ್ದಾರೆ.
ಹಿಲ್ಡಾಗೆ ಮತ್ತೊಬ್ಬ ಅಲ್ವಿನ್ ಮೊಂತೇರೋ ಎಂಬ ಮಗ ಗಲ್ಫ್ ನಲ್ಲಿ ಕೆಲಸ ಮಾಡುತ್ತಿದ್ದಾನೆ.
 ನಿನ್ನೆ (ಜೂನ್ 25) ಮದ್ಯರಾತ್ರಿ ಒಂದು ಗಂಟೆಗೆ ತಾಯಿ ಹಿಲ್ಡಾಳ ತಲೆಗೆ ಮಗ ಮೆಲ್ವಿನ್ ಮಾರಕಾಸ್ತ್ರದಿಂದ ಹೊಡೆದಿದ್ದಾನೆ. ಬಳಿಕ ಅಲ್ಲಿಂದ ಎಳೆದುಕೊಂಡು ಮನೆಯ ಹಿಂಭಾಗಕ್ಕೆ ಹೋಗಿ ಕಾಡಿನಂತಹ ಜಾಗದಲ್ಲಿ ಎಸೆದಿದ್ದಾನೆ. ಬಳಿಕ ಪೆಟ್ರೋಲ್ ಹಚ್ಚಿ ಜೀವಂತವಾಗಿ ಸುಟ್ಟು ಹಾಕಿದ್ದ.
ಅತ್ತೆಗೂ ಕಾದಿತ್ತು!
 ತಾಯಿ ಹಿಲ್ಡಾಳ ಪಕ್ಕದ ಮನೆಯಲ್ಲಿ ಹಿಲ್ಡಾಳ ತಮ್ಮ ವಿಕ್ಟರ್ ಮನೆ ಇತ್ತು. ವಿಕ್ಟರ್ ವಿದೇಶದಲ್ಲಿ ಕೆಲಸದಲ್ಲಿದ್ದು, ಆತನ ಪತ್ನಿ 30 ವರ್ಷದ ಲೊಲಿಟಾ ತನ್ನ 5 ವರ್ಷದ ಮಗುವಿನೊಂದಿಗೆ ವಾಸವಿದ್ದಳು.
ತಾಯಿಯನ್ನು ಕೊಂದ ನಂತರ ಮೆಲ್ವಿನ್ ತನ್ನ ಅತ್ತೆ ಲೊಲಿಟಾ ಮನೆಯ ಬಾಗಿಲು ಬಡಿದಿದ್ದಾನೆ. ಲೊಲಿಟಾಳಿಗೆ ತನ್ನ ತಾಯಿಗೆ ಹುಷಾರಿಲ್ಲ. ಸೀರಿಯಸ್ ಆಗಿದ್ದಾಳೆ ಎಂದು ಹೇಳಿದ್ದಾನೆ. ಇದನ್ನು ಕೇಳಿದ ಲೊಲಿಟಾ ಮಗಲಿದ್ದ ಮಗುವನ್ನು ಒಂಟಿಯಾಗಿ ಮನೆಯಲ್ಲಿ ಬಿಟ್ಟು ಓಡೋಡಿ ಬಂದಿದ್ದಾಳೆ.
ಮನೆಗೆ ಬಂದ ಲೊಲಿಟಾಳಿಗೆ ಹೊಡೆದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಮುಂದಾಗಿದ್ದಾನೆ. ಆಗ ಅಲ್ಲಿಂದಲೊಲಿಟಾ ತಪ್ಪಿಸಿಕೊಂಡು ಕಾಡಿಗೆ ಓಡಿದ್ದಾಳೆ.
ಮುಂಜಾನೆ 5 ಗಂಟೆಗೆ ಒಂದು ಮನೆ ಬಳಿ ಹೋದಾಗ ಅಲ್ಲಿಯವರು ನೋಡಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಸಿದ್ದಾರೆ. ಸದ್ಯ ಲೊಲಿಟಾ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
 ಉಡುಪಿಯಲ್ಲಿ ಸೆರೆಸಿಕ್ಕ
 ತಾಯಿಯನ್ನು ಕೊಂದು ಅತ್ತೆಯನ್ನು ಕೊಲ್ಲಲು ಯತ್ನಿಸಿದ ಪಾಪಿ ಮೆಲ್ವಿನ್ ರಾತ್ರಿ ಇಡೀ ಮನೆಯಲ್ಲಿ ಕಾಲ ಕಳೆದಿದ್ದಾನೆ. ಬಳಿಕ ಬೆಳಗ್ಗೆ ವಿಚಾರ ಊರಿನವರಿಗೆ ತಿಳಿಯುತ್ತಲೆ ಒಬ್ಬೊಬ್ಬರೆ ಅಲ್ಲಿಗೆ ಬಂದಿದ್ದಾರೆ. ಅಲ್ಲಿಂದ ಮೆಲ್ವಿನ್ 2 ಕಿಲೋಮೀಟರ್ ಓಡಿ ಹೋಗಿ ಆಟೋ ಹಿಡಿದು ಹೊಸಂಗಡಿಗೆ ತಲುಪಿದ್ದಾನೆ. ಬಳಿಕ ಮಂಗಳೂರು ಬಸ್ ಹತ್ತಿ ಮಂಗಳೂರು ಕೆ.ಎಸ್.ಆರ್.ಟಿ.ಸಿ ಬಸ್ ಸ್ಟಾಂಡ್ ನಲ್ಲಿ ಇಳಿದಿದ್ದಾನೆ. ಅಲ್ಲಿಂದ ಕುಂದಾಪುರ ಬಸ್ ಹತ್ತಿ ಬೈಂದೂರು ತಲುಪಿದ್ದಾನೆ.
ಮೆಲ್ವಿನ್ ಅರ್ಥ್ ಮೂವರ್ಸ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ. ಬೈಂದೂರು ಸುತ್ತಾಮುತ್ತಾ ಕಲ್ಲಿನಕೋರೆಯಲ್ಲಿ ಈ ಹಿಂದೆ ಕೆಲಸ ಮಾಡಿದ್ದ. ಆದ್ರಿಂದ ಆ ಜಾಗಕ್ಕೆ ಹೋಗಲು ಆತನ ಇಲ್ಲಿಗೆ ಬಂದಿದ್ದ. ಇನ್ನು ಒಂದು ಅಂಗಡಿಯಲ್ಲಿ ಕುಳಿತುಕೊಂಡಿದ್ದಾಗ ಬೈಂದೂರು ಪೊಲೀಸರ ಸಹಕಾರದಿಂದ ಕೇರಳ ಪೊಲೀಸರು ಬಂಧಿಸಿದ್ದಾರೆ. ಸದ್ಯ ಆರೋಪಿ ಮೆಲ್ವಿನ್ ಮೊಂತೇರೋ ಏನು ಬಾಯಿ ಬಿಡುತ್ತಿಲ್ಲ. ನನಗಿನ್ನು ಮದುವೆ ಆಗಿಲ್ಲ ಅಂತಷ್ಟೆ ಪೊಲೀಸರಿಗೆ ಹೇಳಿದ್ದಾನೆ ಎನ್ನುವುದು ತಿಳಿದು ಬಂದಿದೆ.
ಅಲ್ವಿನ್ ವಿದೇಶದಿಂದ ಬಂದ ಬಳಿಕ ಹಿಲ್ಡಾ ಅವರ ಅಂತ್ರಸಂಸ್ಕಾರ ನಡೆಯಲಿದೆ.  ಪೊಲೀಸರ ವಿಚಾರಣೆಯಲ್ಲಿ ಅಸಲಿ ಕಾರಣ ತಿಳಿದು ಬರಲಿದೆ.

1 Comment

Leave a Reply

Your email address will not be published. Required fields are marked *

Most Popular

Exit mobile version