LATEST NEWS

ಆರ್‌ಸಿಬಿ ಕಾಲ್ತುಳಿತ: 3 ಐಪಿಎಸ್‌ ಅಧಿಕಾರಿಗಳ ಅಮಾನತಿಗೆ ಕೇಂದ್ರವೂ ಅಸ್ತು

Share
IPS officers

ಚೆನ್ನಸ್ವಾಮಿ ಸ್ಟೇಡಿಯಮ್‌ ನಲ್ಲಿ ಆರ್‌ಸಿಬಿ ಸಂಭ್ರಮದಲ್ಲಿ ಕಾಲ್ತುಳಿತ ಸಂಭವಿಸಿದಾ ಅಧಿಕಾರದಲ್ಲಿದ್ದ ಪೊಲೀಸ್‌ ಕಮಿಷನರ್‌ ದಯಾನಂದ್‌, ವಿಕಾಸ್‌ ಕುಮಾರ್

ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ವರದಿಯನ್ನು ಕೇಂದ್ರ ಸರ್ಕಾರ ಅಂಗೀಕರಿಸಿದೆ.

ಆರ್‌ಸಿಬಿ ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಉಂಟಾಗಿ11 ಮಂದಿ ದಾರುಣವಾಗಿ ಮೃತಪಟ್ಟಿದ್ದರು. ಈ ದುರಂತದಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದಡಿ ರಾಜ್ಯ ಸರ್ಕಾರ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತು ಮಾಡಿ ಕೇಂದ್ರ ಸರ್ಕಾರಕ್ಕೆ ಮಾಹಿತಿ ರವಾನಿಸಿತ್ತು.

ಇದೀಗ ರಾಜ್ಯ ಸರ್ಕಾರದ ವರದಿಯನ್ನು ಕೇಂದ್ರ ಅಂಗೀಕರಿಸಿದ್ದು, ಡಿಪಿಎಆರ್‌ಗೆ ಮಾಹಿತಿ ರವಾನೆ ಮಾಡಿದೆ. ದಯಾನಂದ್, ವಿಕಾಸ್ ಕುಮಾರ್ ಮತ್ತು ಶೇಖರ್ ಎಂಬ ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಕರ್ತವ್ಯ ಲೋಪ ಆರೋಪದಡಿ ಅಮಾನತುಗೊಳಿಸಿತ್ತು.

Click to comment

Leave a Reply

Your email address will not be published. Required fields are marked *

To Top