DAKSHINA KANNADA
ಅನಾರೋಗ್ಯದಿಂದ ಚಿಕಿತ್ಸೆ ಫಲಕಾರಿಯಾಗದೇ ಯುವಕ ಸಾವು
ಪುತ್ತೂರು: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಮೃತರನ್ನು ಹುಲಿ ವೇಷದ ಸಂದರ್ಭ ತಾಸೆಯ ಬಳಗದಲ್ಲಿ ಗುರುತಿಸಿಕೊಳ್ಳುತ್ತಿದ್ದ ಮತ್ತು ನೇಮ ಇನ್ನಿತರ ಕಾರ್ಯಕ್ರಮಗಳಲ್ಲಿ ಬ್ಯಾಂಡ್ ನಲ್ಲಿ ಡೋಲು ಬಾರಿಸುತ್ತಿದ್ದ, ಕೀರ್ತಿ ಯಾನೆ ರಕ್ಷಿತ್ ಜೋಗಿ (30) ಎಂದು ಗುರುತಿಸಲಾಗಿದೆ. ಇವರು ಪುತ್ತೂರು ಕೆಮ್ಮಿoಜೆ ಯಲ್ಲಿ ವಾಸಿಸುತ್ತಿದ್ದ, ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ನಿನ್ನೆ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.