LATEST NEWS
ಮಳೆಗಾಲದಲ್ಲಿ ಕಳ್ಳತನ ಪ್ರಕರಣ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ
ಮಂಗಳೂರು: ಮಳೆಗಾಲದಲ್ಲಿ ದರೋಡೆ, ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿ ಮುಂಜಾಗ್ರತೆ ವಹಿಸುವಂತೆ ಪೋಲೀಸ್ ಇಲಾಖೆ ಸಾರ್ವಜನಿಕರಿಗೆ ಸೂಚಿಸಿದ್ದಾರೆ.
ದರೋಡೆ ನಡೆಸುವ ಉತ್ತರ ಭಾರತದ ಚಡ್ಡಿ ಗ್ಯಾಂಗ್ ಮಳೆಗಾಲದ ಪ್ರಾರಂಭದಲ್ಲಿ ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಕ್ರಿಯವಾಗಿದೆ ಎಂದು ವರದಿಯಾಗಿದೆ.
ಮಂಗಳೂರು ಅಸುಪಾಸಿನ ಜಿಲ್ಲೆಗಳಾದ ಉಡುಪಿ, ಚಿಕ್ಕಮಗಳೂರು, ಮಡಿಕೇರಿಯಲ್ಲಿ ಕಳೆದ ಒಂದು ವಾರದಿಂದ ಸರಣಿ ಕಳ್ಳತನ ನಡೆಯುತ್ತಿದೆ. ಈ ಗ್ಯಾಂಗ್ ಮಂಗಳೂರು ನಗರಕ್ಕೂ ಬರುವ ಸಾಧ್ಯತೆ ಇರುವುದರಿಂದ ಒಂಟಿ ಮನೆಗಳು, ಬೀದಿಯ ಕೊನೆಯ ಮನೆಗಳು ಹಾಗೂ ನಾಗರಿಕರು ಸಾಕಷ್ಟು ಎಚ್ಚರಿಕೆಯಿಂದ ಇರಬೇಕು. ಯಾವುದೇ ಅಪರಿಚಿತ ವ್ಯಕ್ತಿಗಳ ಬಗ್ಗೆ ಮಾಹಿತಿ ನೀಡುವಂತೆ ಪೊಲೀಸರು ಹೇಳಿದ್ದಾರೆ.