LATEST NEWS
ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ ಕಳವು
ಕುಶಾಲನಗರ ತಾಲ್ಲೂಕಿನ ಕೂಡಿಗೆ ಗ್ರಾಮದ ಮುಖ್ಯ ರಸ್ತೆಯಲ್ಲಿರುವ ಲಕ್ಷ್ಮೀ ಜುವೆಲರಿ ಅಂಗಡಿ ಮಾಲೀಕನ ಮನೆಗೆ ಕಳ್ಳರು ಕನ್ನ ಹಾಕಿದ್ದು ಮನೆಯಲ ಲಾಕರ್ ನಿಂದ ರೂ 14 ಲಕ್ಷ ನಗದು ದೋಚಿ ಪರಾರಿಯಾಗಿದ್ದಾರೆ.
ಕಾರ್ಯ ನಿಮಿತ್ತ ಕುಟುಂಬ ಸಮೇತ ಕುಮಾರ್ ಹೊರಗೆ ತೆರಳಿದ್ದನ್ನು ಖಚಿತಪಡಿಸಿಕೊಂಡ ಕಳ್ಳರು ಮುಂಬಾಗಿಲನ್ನು ಮುರಿದು ಒಳನುಗ್ಗಿ ಕೈ ಚಳಕ ತೋರಿಸಿದ್ದಾರೆ. ಸ್ಥಳಕ್ಕೆ ಕುಶಾಲನಗರ ಪೊಲೀಸರು, ಅಪರಾಧ ಪತ್ತೆ ದಳ ಭೇಟಿ ನೀಡಿ ಪರಿಶೀಲನೆ ನಡೆಸಿ ಕಳ್ಳರ ಶೋಧ ಕಾರ್ಯ ನಡೆಸುತ್ತಿದ್ದಾರೆ.