CRIME NEWS

ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 34ಕ್ಕೆ ಏರಿಕೆ

Posted on

Share

ಹೈದರಾಬಾದ್‌: ತೆಲಂಗಾಣದ ಸಂಗಾರೆಡ್ಡಿ ನಗರದ ಔಷಧ ಕಾರ್ಖಾನೆಯಲ್ಲಿ ಸೋಮವಾರ ಸಂಭವಿಸಿದ್ದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Thelangana blast

Blast

ಪಾಶಮೈಲಾರಂ ಕೈಗಾರಿಕಾ ಪ್ರದೇಶದಲ್ಲಿರುವ ಸಿಗಾಚಿ ಫಾರ್ಮಾ ಕಂಪನಿಯ ರಿಯಾಕ್ಟರ್‌ನಲ್ಲಿ ರಾಸಾಯನಿಕ ವಸ್ತುವಿಗೆ ಬೆಂಕಿ ಹೊತ್ತಿಕೊಂಡು ಸ್ಫೋಟ ಸಂಭವಿಸಿದೆ ಎಂದು ಮೂಲಗಳು ಹೇಳಿವೆ. ಆದರೆ, ಸ್ಫೋಟಕ್ಕೆ ನಿಖರ ಕಾರಣ ಸಮಗ್ರ ಪರಿಶೀಲನೆಯ ಬಳಿಕವೇ ತಿಳಿಯಲಿದೆ ಎಂದು ತಾಂತ್ರಿಕ ತಜ್ಞರು ತಿಳಿಸಿದ್ದಾರೆ.

ಸೋಮವಾರ ಬೆಳಿಗ್ಗೆ 9.28ರಿಂದ 9.35ರ ನಡುವೆ ಸ್ಫೋಟ ಸಂಭವಿಸಿತ್ತು. ಈ ವೇಳೆ ಕಾರ್ಖಾನೆಯಲ್ಲಿ 150 ಮಂದಿ ಕೆಲಸ ಮಾಡುತ್ತಿದ್ದರು. ಅದರಲ್ಲಿ ಸುಮಾರು 90 ಮಂದಿ ಸ್ಫೋಟ ನಡೆದ ಸ್ಥಳದ ಸಮೀಪದಲ್ಲೇ ಇದ್ದರು’ ಎಂದು ಕಾರ್ಖಾನೆಯ ಮೂಲಗಳನ್ನು ಉಲ್ಲೇಖಿಸಿ ಐಜಿಪಿ ವಿ.ಸತ್ಯನಾರಾಯಣ ಹೇಳಿದ್ದರು.

ಸತ್ತವರಲ್ಲಿ ಕೆಲವರ ಮೃತದೇಹ ಸಂಪೂರ್ಣ ಸುಟ್ಟುಹೋಗಿದ್ದು, ಗುರುತು ಪತ್ತೆಹಚ್ಚಲು ಡಿಎನ್‌ಎ ಪರೀಕ್ಷೆ ನಡೆಸಲಾಗುವುದು ಎಂದಿದ್ದಾರೆ.

ಸ್ಫೋಟದಿಂದ ಬೆಂಕಿ ಹಾಗೂ ದಟ್ಟ ಹೊಗೆ ಎದ್ದಿದೆ. ಅಗ್ನಿಶಾಮಕ ದಳದ 10 ವಾಹನಗಳನ್ನು ಬಳಸಿ ಬೆಂಕಿಯನ್ನು ಹತೋಟಿಗೆ ತರಲಾಗಿದೆ. ಸ್ಫೋಟದ ಸದ್ದು 5 ಕಿ.ಮೀ. ದೂರದವರೆಗೂ ಕೇಳಿಸಿದ್ದು, ಕಟ್ಟಡದ ಒಂದು ಭಾಗ ಕುಸಿದುಬಿದ್ದಿದೆ. ಸ್ಥಳೀಯ ಪೊಲೀಸರು, ಎನ್‌ಡಿಆರ್‌ಎಫ್‌ ಮತ್ತು ಎಸ್‌ಡಿಆರ್‌ಎಫ್‌ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡರು.

1 Comment

Leave a Reply

Your email address will not be published. Required fields are marked *

Most Popular

Exit mobile version