LATEST NEWS

ಸೇವಾ ಕಾರ್ಯಗಳಿಗೆ ಯೂತ್ ರೆಡ್‌ಕ್ರಾಸ್ ಪ್ರೇರಣೆ – ಸಚೇತ್ ಸುವರ್ಣ

Posted on

Share
ಮಂಗಳೂರು :  ವಿದ್ಯಾರ್ಥಿಗಳು ಮಾನವೀಯ ಸೇವೆಯಲ್ಲಿ  ತೊಡಗಿಸಿಕೊಳ್ಳಲು  ಯೂತ್ ರೆಡ್ ಕ್ರಾಸ್ ಪ್ರೇರಣೆ ನೀಡುತ್ತಿದೆ. ಮಂಗಳೂರು ವಿಶ್ವವಿದ್ಯಾಲಯದ  ಎಲ್ಲ ಕಾಲೇಜುಗಳಲ್ಲಿ ಯೂತ್ ರೆಡ್ ಕ್ರಾಸ್ ಘಟಕಗಳನ್ನು ತೆರೆಯುವ ಮೂಲಕ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವನೆ ಬೆಳೆಸುವುದು ಅವಶ್ಯ
ಎಂದು ಯೂತ್ ರೆಡ್ ಕ್ರಾಸ್ ನಿರ್ದೇಶಕ , ಉಪನ್ಯಾಸಕ ಸಚೇತ್ ಸುವರ್ಣ ಹೇಳಿದರು.
ಯೇನೆಪೊಯ ಪರಿಗಣಿತ ವಿ.ವಿ.ಯ ಯೂತ್ ರೆಡ್‌ಕ್ರಾಸ್ ಘಟಕದ ವತಿಯಿಂದ  ಯೇನೆಪೊಯ ಮೆಡಿಕಲ್ ಕಾಲೇಜ್ ಹಾಸ್ಪಿಟಲ್ ಸಭಾಂಗಣದಲ್ಲಿ ಗುರುವಾರ ನಡೆದ ಯೂತ್ ರೆಡ್‌ಕ್ರಾಸ್ ಯೋಜನಾಧಿಕಾರಿಗಳ  ಸಾಮರ್ಥ್ಯ ವರ್ಧನೆ ಕಾರ್ಯಾಗಾರದಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು.
 ರೆಡ್‌ಕ್ರಾಸ್ ಸೊಸೈಟಿ ದ.ಕ.ಜಿಲ್ಲಾ ಘಟಕದ ನಿರ್ದೇಶಕ ಪಿ.ಬಿ.ಹರೀಶ್ ರೈ ಕಾರ್ಯಾಗಾರ ಉದ್ಘಾಟಿಸಿದರು.
ರೆಡ್ ಕ್ರಾಸ್ ಕಾರ್ಯದರ್ಶಿ ಕಿಶೋರ್‌ಚಂದ್ರ ಹೆಗ್ಡೆ ಮುಖ್ಯ ಅತಿಥಿಯಾಗಿದ್ದರು. ಯೇನೆಪೊಯ ಪರಿಗಣಿತ ವಿ.ವಿ.ಯ ಕುಲಪತಿ ಡಾ.ಎಂ.ವಿಜಯಕುಮಾರ್ ಅಧ್ಯಕ್ಷತೆ ವಹಿಸಿದ್ದರು
ಯೋಜನಾಧಿಕಾರಿ ಡಾ.ಹರಿ ನಾರಾಯಣನ್ ಸ್ವಾಗತಿಸಿ,
 ಯೂತ್ ರೆಡ್‌ಕ್ರಾಸ್ ಘಟಕದ ನೋಡಲ್ ಅಧಿಕಾರಿ ನಿತ್ಯಶ್ರೀ .ಬಿ.ವಿ. ವಂದಿಸಿದರು.
ಅದ್ರಿಜಾ ಭೂನಿಯ ಮತ್ತು ಡಾ.ಪ್ರತೀಕ್ಷಾ ಕಾರ್ಯಕ್ರಮ‌ ನಿರೂಪಿಸಿದರು.
ಸ್ವಸ್ತಿಕಾ ನ್ಯಾಶನಲ್ ಬ್ಯುಸಿನೆಸ್ ಕಾಲೇಜಿನ ಚೇರ್ಮನ್ ಡಾ.ರಾಘವೇಂದ್ರ ಹೊಳ್ಳ, ಅಸಿಸ್ಟೆಂಟ್ ಪ್ರೊಫೆಸರ್ ಪ್ರೀತಿ ಶೆಟ್ಟಿಗಾರ್, ಸಿಐಎಲ್ ನ ಕಾರ್ಯನಿರ್ವಾಹಕ ನಿರ್ದೇಶಕಿ ಸಚಿತಾ ನಂದಗೋಪಾಲ್, ಯೇನೆಪೊಯ ಮೆಡಿಕಲ್ ಕಾಲೇಜ್ ಹಾಸ್ಪಿಟಲ್ ನ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥ ಡಾ.ಮಹಮ್ಮದ್ ಗುತ್ತಿಗಾರ್,  ಮಂಗಳೂರು  ವಿ.ವಿ. ಎನ್ ಎಸ್ ಎಸ್ ಯೋಜನಾಧಿಕಾರಿ ಡಾ.ಶೇಷಪ್ಪ ಅಮೀನ್.ಕೆ.  ಎರಡು ದಿನದ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು.

Leave a Reply

Your email address will not be published. Required fields are marked *

Most Popular

Exit mobile version