CRIME NEWS

ದನಗಳ್ಳ ಪಾರಿವಾಳ ಕಬೀರ್ ಈಗ MDM ಡ್ರಗ್ಸ್ ಪೆಡ್ಲರ್

Posted on

Share

ಮಂಗಳೂರು: ಕಾರಿನಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಕುಖ್ಯಾತ ದನಕಳ್ಳನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ

    ದನಗಳ್ಳ ಪಾರಿವಾಳ ಕಬೀರ್

ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ತಂದು ಮುಡಿಪು ಕಂಬಳ ಪದವು ಕೆಐಡಿಬಿ ರಸ್ತೆಯ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಕುಖ್ಯಾತ ದನಕಳ್ಳ ಅಬ್ದುಲ್ ಕಬೀರ್ ಯಾನೆ ಪಾರಿವಾಳ ಕಬೀರ್ ಎಂಬಾತನನ್ನು ಪೊಲೀಸರು ಬಂಧಿಸಿ ಆತನಿಂದ  12.05 ಗ್ರಾಂ ಎಂಡಿಎಂಎ  ವಶಪಡಿಸಿಕೊಂಡಿದ್ದಾರೆ. ಮಂಗಳೂರು ನಗರಕ್ಕೆ ಬೆಂಗಳೂರು/ಮುಂಬೈಯಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ತರಿಸಿಕೊಂಡು ಅದನ್ನು ಮಂಗಳೂರು ನಗರದ ಮಾದಕ ದ್ರವ್ಯಸನಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಬಿಳಿ ಬಣ್ಣದ ಸ್ವೀಪ್ಟ್ ಕಾರಿನಲ್ಲಿ ಮುಡಿಪು ಕಂಬಳ ಪದವು ಕೆಐಡಿಬಿ ರಸ್ತೆಯಲ್ಲಿ ಮಾರಾಟ ಮಾಡುತ್ತಿದ್ದ.

ಆರೋಪಿಯಿಂದ ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್, KA-25-MA-8950ನೇ ನಂಬ್ರದ ಬಿಳಿ ಬಣ್ಣದ ಸ್ವೀಪ್ಟ್ ಕಾರು ಸಹಿತ ಒಟ್ಟು ರೂ. 4,31,250/- ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈತನ ವಿರುದ್ದ ಪಣಂಬೂರು, ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಮಂಗಳೂರು ಪೂರ್ವ, ಕಂಕನಾಡಿ ನಗರ, ಉಳ್ಳಾಲ, ಬಜ್ಪೆ, ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಉಪ್ಪಿನಂಗಡಿ ಪೊಲೀಸ್ ಠಾಣೆ, ಕೊಡಗು ಜಿಲ್ಲಾ ವ್ಯಾಪ್ತಿಯ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ 15 ಕ್ಕಿಂತ ಹೆಚ್ಚು ದನ ಕಳ್ಳತನ ಪ್ರಕರಣಗಳು ದಾಖಲಾಗಿದೆ.

ಪ್ರಕರಣಗಳಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ನ್ಯಾಯಾಲಯಕ್ಕೆ ಹಾಜರಾಗದೇ ಸುಮಾರು 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಆರೋಪಿಯ ವಿಳಾಸ: . ಅಬ್ದುಲ್ ಕಬೀರ್ @ ಪಾರಿವಾಳ ಕಬೀರ್, ಪ್ರಾಯ: 36 ವರ್ಷ, ತಂದೆ: ದಿ.ಮೊಹಮ್ಮದ್ ಖಾಸೀಂ, ವಿಳಾಸ: MGM 602, ಕಸಬಾ ಬೆಂಗ್ರೆ, ಮಂಗಳೂರು. ಹಾಲಿವಾಸ: ಕ್ಯಾರ್ ಆಫ್ ದಿ. ಹಮೀದ್, ಪೊಲೀಸ್ ಕ್ವಾಟ್ರಸ್ ರಸ್ತೆ, ಪಟ್ಟೋರಿ, ಆಸೈಗೋಳಿ, ಕೊಣಾಜೆ, ಮಂಗಳೂರು

Leave a Reply

Your email address will not be published. Required fields are marked *

Most Popular

Exit mobile version