Karkala
ಪತ್ರಕರ್ತರೊಂದಿಗೆ ಸಮಾಲೋಚನಾ ಸಂವಾದ ಸಭೆ
ಮಂಗಳೂರು : ಸ್ವಸಹಾಯ ಸಂಘಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಿರಿಯ ಸಹಕಾರಿ ಧುರೀಣ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ. ಎನ್. ರಾಜೇಂದ್ರ ಕುಮಾರ್ ರವರು ಪತ್ರಕರ್ತರೊಂದಿಗೆ ಸಂವಾದ ಸಭೆಯನ್ನು ಶನಿವಾರ ಕಾರ್ಕಳದ ದಾನಶಾಲೆ ಬಾಹುಬಲಿ ಪ್ರವಚನ ಮಂದಿರದಲ್ಲಿ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಡಾ. ಎಂ. ಎನ್. ರಾಜೇಂದ್ರ ಕುಮಾರ್ ರವರು ಕೇಂದ್ರ ಸರಕಾರ ಗ್ರಾಮೀಣ ಮಟ್ಟದಲ್ಲಿರುವ ಸಹಕಾರಿ ಬ್ಯಾಂಕ್ ಗಳಿಗೆ ಸರಕಾರಿ ಸಾಲ ಸವಲತ್ತುಗಳನ್ನು ನೀಡುವ ಜವಾಬ್ದಾರಿ ವಹಿಸಿದ್ದಲ್ಲಿ ಸೂಕ್ತ ಹಾಗೂ ಸಮರ್ಪಕವಾಗಿ ನಿರ್ವಹಿಸಬಹುದಾಗಿದೆ. ಇದರಿಂದಾಗಿ ಸರಕಾರಿ ಸಾಲ ಸವಲತ್ತುಗಳು ಗ್ರಾಮದ ಕಟ್ಟ ಕಡೆಯ ವ್ಯಕ್ತಿಗಳಿಗೂ ಸಿಗುವಂತಾಗಲಿದೆ ಎಂದರು.
ಸಹಕಾರಿ ಕ್ಷೇತ್ರದಲ್ಲಿ ಸಾಲ ಪಡೆದುಕೊಂಡಿರುವ ಬಡ ವರ್ಗದ ಜನತೆ ನಿಷ್ಠಾವಂತರಾಗಿ ಶೇ 100 ಸಾಲ ಮರುಪಾವತಿ ಮಾಡುತ್ತಿರುವುದರಿಂದ ಸಹಕಾರಿ ಕ್ಷೇತ್ರ ಪ್ರಗತಿಯತ್ತ ಸಾಗಲು ಕಾರಣವಾಗಿದೆಡಾ. ಎಂ ಎನ್ ರಾಜೇಂದ್ರ ಕುಮಾರ್.
ಸಹಕಾರಿ ಕ್ಷೇತ್ರದಲ್ಲಿ ಮಹಿಳೆಯರು ಹೆಚ್ಚಾಗಿ ತಮ್ಮನ್ನು ತೊಡಗಿಸಿ ಕೊಂಡಿರುವುದರಿಂದ ಇಂದು ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಳ್ಳುವುದರ ಜೊತೆಗೆ ಸ್ವಾವಲಂಬಿ ಬದುಕು ನಡೆಸಲು ಸಹಕಾರ ಕ್ಷೇತ್ರ ಸಹಕಾರಿಯಾಗಿದೆ.
ಹೊರ ಜಿಲ್ಲೆಗಳ ಸಣ್ಣ ಹಾಗೂ ಭಾರಿ ಉದ್ಯಮಗಳಿಗೆ, ಸಕ್ಕರೆ ಕಾರ್ಖಾನೆಗಳಿಗೆ ಸಾಲ ನೀಡುತಿದ್ದು, ಸಹಕಾರಿ ಬ್ಯಾಂಕ್ ಗಳು ರಾಷ್ಟ್ರೀಕೃತ ಬ್ಯಾಂಕ್ ಗಳಂತೆ ಉದ್ಯಮ, ಕೈಗಾರಿಕೆಗಳಿಗೂ ಸಾಲ ನೀಡುವ ಮಟ್ಟಕ್ಕೆ ಬೆಳೆಯುವಂತಾಗಿದೆ ಎಂದರು
ಈ ಸಂದರ್ಭದಲ್ಲಿ ಎಸ್ ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಇರ್ವತ್ತೂರು ಭಾಸ್ಕರ್ ಕೋಟ್ಯಾನ್, ಶಶಿಕುಮಾರ್ ರೈ ಬಾಲ್ಯೋಟ್ಟು , ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ನಿರ್ದೇಶಕ ಮೇಘರಾಜ್ ಜೈನ್, ಮುಖ್ಯಕಾರ್ಯ ನಿರ್ವಹಣಾಧಿಕಾರಿ ಪೂರ್ಣಿಮಾ ಶೆಟ್ಟಿ,
ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೊಹಮ್ಮದ್ ಶರೀಫ್, ಪದಾಧಿಕಾರಿಗಳು ಹಾಗೂ ಪತ್ರಿಕಾ ಪ್ರತಿನಿಧಿಗಳು ಇದ್ದರು.