Share
ಬೆಂಗಳೂರು: ರಾಜ್ಯದಲ್ಲಿ ಹೃದಯಾಘಾತದಿಂದ ಜನರ ಸರಣಿ ಸಾವಿನ ಬೆನ್ನಲ್ಲೇ ಕರ್ನಾಟಕ ಆರೋಗ್ಯ ಇಲಾಖೆ ಸಾವಿಗೆ ಕಾರಣ ಹುಡುಕುವ ಪ್ರಯತ್ನ ನಡೆಸಿದೆ.
ಇದರ ಅಂಗವಾಗಿ ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ. ರವೀಂದ್ರನಾಥ್ ನೇತೃತ್ವದಲ್ಲಿ ಅಧ್ಯಯನಕ್ಕಾಗಿ ತಾಂತ್ರಿಕ ಸಲಹಾ ಸಮಿತಿ ರಚಿಸಿದ್ದು. ಈ ಸಮಿತಿ ಹಠಾತ್ ಹೃದಯಾಘಾತ ಹೆಚ್ಚಳಕ್ಕೆ ಕಾರಣವೇನು ಎಂಬುದರ ಬಗ್ಗೆ ಅಧ್ಯಯನಕ್ಕಿಳಿದಿತ್ತು.  ಆ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ.
ಜಯದೇವ ಆಸ್ಪತ್ರೆ ನಿರ್ದೇಶಕ ರವೀಂದ್ರನಾಥ್ ನೇತೃತ್ವದ ಸಮಿತಿ, 251 ರೋಗಿಗಳನ್ನು ಅಧ್ಯಯನಕ್ಕೆ ಒಳಪಡಿಸಿತ್ತು. ಅದರಲ್ಲೂ ಮೂರು ವಯೋವರ್ಗಗಳನ್ನು ಗುರುತಿಸಿ ಅಧ್ಯಯನ ನಡೆಸ ಲಾಗಿದೆ.
ಮೂರು ವಿಭಾಗಗಳಲ್ಲಿ ಹೃದ್ರೋಗಿಗಳ ಅಧ್ಯಯನ
30 ವರ್ಷಕ್ಕಿಂತ ಕಡಿಮೆ ವಯಸ್ಸಿನ 12 ಹೃದ್ರೋಗಿಗಳ ಬಗ್ಗೆ ಅಧ್ಯಯನ ನಡೆಸಲಾಗಿತ್ತು. 31 ರಿಂದ 40 ವಯಸ್ಸಿನ 66 ಹೃದ್ರೋಗಿಗಳ ಬಗ್ಗೆ ಅಧ್ಯಯನ ಮಾಡಲಾಗಿತ್ತು. ಜೊತೆಗೆ 41 ರಿಂದ 45 ವಯಸ್ಸಿನ 172 ಹೃದ್ರೋಗಿಗಳ ಬಗ್ಗೆ ಅಧ್ಯಯನ ಮಾಡಲಾಗಿತ್ತು.
ಹೃದಯಾಘಾತ: ತಜ್ಞರ ವರದಿ ಹೀಗಿದೆ:
ತಜ್ಞರ ವರದಿಯ ಪ್ರಕಾರ, ಒಟ್ಟು 251 ಮಂದಿಗೆ ಆರೋಗ್ಯ ತಪಾಸಣೆ ಮಾಡಲಾಗಿದೆ. 218 ಜನ ಪುರುಷರಿದ್ದು, 33 ಮಹಿಳೆಯರನ್ನು ಅಧ್ಯಯನಕ್ಕೆ ಒಳಪಡಿಸಲಾಗಿದೆ.
 251 ರೋಗಿಗಳಲ್ಲಿ 87 ಮಂದಿಯಲ್ಲಿ ಮಧುಮೇಹ ಕಂಡುಬಂದಿದೆ. 102 ರೋಗಿಗಳಿಗೆ ಬಿಪಿ, 35 ಕೊಲೆಸ್ಟ್ರಾಲ್ ಇದೆ.
40 ಮಂದಿಗೆ ಹೃದಯ ಸಂಬಂಧಿ ಕಾಯಿಲೆ ಇದೆ. 111 ಮಂದಿ ಧೂಮಪಾನಿಗಳಾಗಿದ್ದಾರೆ. 19 ಮಂದಿಗೆ ಕೊವಿಡ್ ಸೋಂಕೊನ ಹಿನ್ನೆಲೆ ಇತ್ತು.
ಇನ್ನುಳಿದ 77 ಮಂದಿಗೆ ಯಾವುದೇ ರೋಗಗಳು ಇರಲಿಲ್ಲ.
 ನ್ಯೂರಾಲಜಿಕಲ್ ಸಮಸ್ಯೆಯ ಅಧ್ಯಯನ ಬಾಕಿ ಇದ್ದು, ನಿಮ್ಹಾನ್ಸ್ ತಜ್ಞರು ವರದಿ ಕೊಟ್ಟ ಬಳಿಕ ಅಂತಿಮ ವರದಿ ಸಲ್ಲಿಕೆಯಾಗಲಿದೆ.
ಕರ್ನಾಟಕದ ಹೃದಯಕ್ಕೆ ಆಘಾತ: ವರದಿ ಬಿಡುಗಡೆ
Click to comment

Leave a Reply

Your email address will not be published. Required fields are marked *

To Top