DAKSHINA KANNADA

ಕೆಂಪು ಕಲ್ಲು ಪರಿಹಾರಕ್ಕೆ ಬೆಂಗಳೂರಲ್ಲಿ ಸಭೆ

Posted on

Share

ಬೆಂಗಳೂರು: ವಿಧಾನಸೌಧದಲ್ಲಿ ಇಂದು ಸ್ಪೀಕರ್ ಯುಟಿ ಖಾದರ್ ಹಾಗೂ ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಮರಳು ಹಾಗೂ ಕೆಂಪುಕಲ್ಲು ಗಣಿಗಾರಿಕೆ ಕುರಿತಂತೆ ವಿಸ್ತ್ರತವಾದ ಚರ್ಚೆ ನಡೆಸಲಾಯಿತು

ಬೆಂಗಳೂರಿನ ವಿಧಾನಸೌಧದಲ್ಲಿ ವಿಧಾನಸಭಾಧ್ಯಕ್ಷ ಯು ಟಿ ಖಾದರ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮನೆ, ಕಟ್ಟಡ ಕಾಮಗಾರಿಗಳಿಗೆ ಅಡೆತಡೆಯಾಗಿರುವ ವಿಚಾರಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಕಾನೂನು ಬದ್ಧವಾಗಿ ಕೆಂಪುಕಲ್ಲು ಹಾಗೂ ಮರಳು ಗಣಿಗಾರಿಕೆಗೆ ಅವಕಾಶ ಕಲ್ಪಿಸಿಕೊಡಲು ಸೂಕ್ತ ಗಣಿ ನೀತಿಯನ್ನ ಜಾರಿಗೆ ತರುವ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಸಚಿವ ದಿನೇಶ್ ಗುಂಡೂರಾವ್ ಹಾಗೂ ಸ್ಪೀಕರ್ ಯು.ಟಿ ಖಾದರ್ ಅವರು ಗಣಿ‌ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಾರದೊಳಗೆ ಗಣಿ ಸಚಿವರೊಂದಿಗೆ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು.

Leave a Reply

Your email address will not be published. Required fields are marked *

Most Popular

Exit mobile version