CRIME NEWS

ಶರಣ್ ಪಂಪುವೆಲ್ ಗೆ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ

Share

ಚಿಕ್ಕಮಗಳೂರು ಪ್ರವೇಶಿಸದಂತೆ ನಿರ್ಬಂಧ

: ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್‌ಗೆ ಕಾಫಿನಾಡು ಪ್ರವೇಶಿಸದಂತೆ ಒಂದು ತಿಂಗಳ ಕಾಲ ಸಂಪೂರ್ಣ ನಿರ್ಬಂಧ ಹೇರಿದೆ. ದಿನಾಂಕ 06-07-2025 ರಿಂದ 04-08-2025 ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.

ಶರಣ್ ಪಂಪ್‌ವೆಲ್‌ ಮೇಲೆ 22ಕ್ಕೂ ಹೆಚ್ಚು ಕಾನೂನು ಪ್ರಕರಣಗಳು ದಾಖಲಾಗಿದ್ದು, ಚಿಕ್ಕಮಗಳೂರು, ಮೂಡಿಗೆರೆ, ಮತ್ತು ಆಲ್ದೂರಿನಲ್ಲಿ ಸಭೆ-ಸಮಾರಂಭಗಳನ್ನು ಆಯೋಜಿಸಿದ್ದಾರೆ.

ಕೋಮುದ್ವೇಷ ಹರಡುವ ಮತ್ತು ಪ್ರಚೋದನಾಕಾರಿ ಭಾಷಣಗಳಿಂದ ಗಲಾಟೆ ಹಾಗೂ ಗುಂಪು ಘರ್ಷಣೆಗಳಿಗೆ ಕಾರಣರಾಗಿದ್ದಾರೆ ಎಂದು ಆರೋಪಿಸಲಾಗಿದೆ.

 

 

To Top