CRIME NEWS

ಬೀರಮಲೆ ಜೋಡಿ ಗೆ ಕಿರುಕುಳ: ಇಬ್ಬರ ಸೆರೆ! ಅಪ್ರಾಪ್ತ ಯುವಕ ಅನ್ಯ ಧರ್ಮದವನಲ್ಲ!

Posted on

Share

ಪುತ್ತೂರು:  ಬೀರಮಲೆ ಬೆಟ್ಟದಲ್ಲಿ  ವಿಹಾರದಲ್ಲಿ ತೊಡಗಿಕೊಂಡಿದ್ದ ಇಬ್ಬರು ಅಪ್ರಾಪ್ತ ಜೋಡಿಗೆ ಕಿರುಕುಳ ನೀಡಿದವರ ವಿರುದ್ಧ ಗಂಭೀರ ಪ್ರಕರಣ ದಾಖಲಾಗಿದೆ.

ಜೋಡಿಗೆ ಅವಾಚ್ಯ ಶಬ್ದಗಳಿಂದ ಬೈದು,  ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತೇವೆಂದು ಬೆದರಿಕೆ ಹಾಕಲಾಗಿತ್ತು.

ಅಪ್ರಾಪ್ತ ವಯಸ್ಸಿನ ಯುವಕನನ್ನು ಅನ್ಯಧರ್ಮದವನೆಂದು ನಿಂದಿಸಿ, ಸ್ಥಳದಲ್ಲಿದ್ದ ಇತರ ಸಾರ್ವಜನಿಕರನ್ನು ಕರೆದು ಅವಮಾನಿಸಿ ವಿಡಿಯೋ ಮಾಡಲಾಗಿತ್ತು.

ಅಷ್ಟು ಮಾತ್ರವಲ್ಲದೆ ವಿಡಿಯೋವನ್ನು ಸಾಮಾಜಿಕ ಜಾಲತಾಣವಾದ ವಾಟ್ಸಪ್ ಮತ್ತು ಇನ್ ಸ್ಟ್ರಾಗ್ರಾಮ್ ನಲ್ಲಿ ಹರಿಯಬಿಟ್ಟು,  ಜೋಡಿ ಒಂದೇ ಸಮುದಾಯಕ್ಕೆ ಸೇರಿದ್ದರು ವೀಡಿಯೋದಲ್ಲಿ ಅಪ್ರಾಪ್ತ ಯುವಕ ಅನ್ಯ ಧರ್ಮದವ ಎಂದು ಹೇಳಿ ಪ್ರಸಾರ ಮಾಡಲಾಗಿತ್ತು.

ಈ ಮೂಲಕ ಕೋಮು ಸಾಮರಸ್ಯ ಕದಡಲು ಹಾಗೂ ಧರ್ಮಗಳ ನಡುವೆ ದ್ವೇಷ ಉಂಟಾಗಲು ಪ್ರಚೋದನೆ ಮಾಡಿದ  ಇಬ್ಬರು ವ್ಯಕ್ತಿಗಳ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುದ್ಮಾರು, ಕಡಬ ನಿವಾಸಿ ಪುರುಷೋತ್ತಮ (43) ಹಾಗೂ ಆರ್ಯಾಪು, ಪುತ್ತೂರು ನಿವಾಸಿ ರಾಮಚಂದ್ರ (38) ಬಂಧನ ಕೊಳಗಾದವರು.

 ಸಂತ್ರಸ್ತರಿಬ್ಬರೂ ಅಪ್ರಾಪ್ತರಾಗಿರುವುದರಿಂದ, ಪ್ರಕರಣದ ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಯಾವುದೇ ಮಾಧ್ಯಮಗಳು ಪ್ರಸಾರ ಮಾಡುವಾಗ ಬಾಲ ನ್ಯಾಯ ಕಾಯ್ದೆ ಹಾಗೂ ಬಾಲ ನ್ಯಾಯ ನಿಯಮಾವಳಿಗಳನ್ನು ಪಾಲಿಸಬೇಕು.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್

ಆರೋಪಿಗಳ ವಿರುದ್ಧ ದಾಖಲಾದ ಕೇಸ್ ಕಲಂ ಗಳು: ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 54/2025, ಕಲಂ: 126(2), 352, 351(2), 353(1)(C), 57, 196(1)(a) ಜೊತೆಗೆ 3(5) BNS 2023 

Most Popular

Exit mobile version