Mangaluru
ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರಿಗೆ ಅಭಿನಂದನೆ
ಮಂಗಳೂರು : ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಪ್ರಯೋಜಿತ ನವೋದಯ ಸ್ವಸಹಾಯ ಸಂಘಗಳ ರಜತ ಸಂಭ್ರಮವನ್ನು ಯಶಸ್ವಿಯಾಗಿ ಸಂಘಟಿಸಿದ ಸಹಕಾರ ರತ್ನ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರನ್ನು ಮಂಗಳೂರಿನ ಲೆಕ್ಕಪರಿಶೋಧಕರಾದ ಸಿಎ ನರೇಂದ್ರ ಪೈ ಪಿ, ಅವರು ತಮ್ಮ ಬಳಗದೊಂದಿಗೆ ಸೋಮವಾರ ಎಸ್ ಸಿಡಿಸಿಸಿ ಬ್ಯಾಂಕ್ ನಲ್ಲಿ ಅಭಿನಂದಿಸಿದರು.
ಸಹಕಾರ ಕ್ಷೇತ್ರದಲ್ಲಿ ಅಗ್ರಮಾನ್ಯ ನಾಯಕರಾಗಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿರುವ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರು ನವೋದಯ ಸ್ವಸಹಾಯ ಸಂಘಗಳಿಗೆ ಭದ್ರ ನೆಲೆಯನ್ನು ತಂದುಕೊಟ್ಟವರು. ಅದರಲ್ಲೂ ಮಹಿಳಾ ಸಬಲೀಕರಣಕ್ಕೆ ಇವರು ವಿಶೇಷ ಕೊಡುಗೆಯನ್ನು ನೀಡಿದ್ದಾರೆ. ಅವರ ಈ ಪ್ರಾಮಾಣಿಕ ಹಾಗೂ ನಿಸ್ವಾರ್ಥ ಸೇವೆಯನ್ನು ಗುರುತಿಸಿ ಲೆಕ್ಕಪರಿಶೋಧಕರು ಸಂಮಾನಿಸಿದರು.
ಈ ಸಂದರ್ಭದಲ್ಲಿ ಬ್ಯಾಂಕ್ ನ ನಿರ್ದೇಶಕರುಗಳಾದ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ಶಶಿಕುಮಾರ್ ಬಾಲ್ಯೋಟ್ಟು, ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಸುಧೀರ್ ಕುಮಾರ್, ಬಜಪೆ ವ್ಯವಸಾಯ ಸೇವಾ ಸಹಕಾರ ಸಂಘದ ನಿರ್ದೇಶಕ ರತ್ನಾಕರ ಶೆಟ್ಟಿ, ಉದ್ಯಮಿ ಜಯಪ್ರಕಾಶ್ ತುಂಬೆ, ಸಿಎ ನರಸಿಂಹ ಕಾಮತ್, ಶಿರಾಲ್ ಎಸ್. ರೈ