CRIME NEWS

ಮುಲ್ಕಿ ಕೊಲೆ ಆರೋಪಿಗೆ ಜಾಮೀನು ಮಂಜೂರು

Posted on

Share

ಬೆಂಗಳೂರು: ಮುಲ್ಕಿಯ ಯುವ ಉದ್ಯಮಿ ಅಬ್ದುಲ್ ಲತೀಫ್ ಕೊಲೆ ಪ್ರಕರಣದಲ್ಲಿ ಆರೋಪಿ ಮೊಹಮ್ಮದ್ ರಜೀಮ್ ಎಂಬವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಉದ್ಯಮಿ ಲತೀಫ್ ಕೊಲೆಗೆ ಸಂಬಂಧಿಸಿ ಹತ್ತು ಜನರ ಮೇಲೆ ಮುಲ್ಕಿ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಪ್ರಕರಣವು ಮಂಗಳೂರಿನ ಜಿಲ್ಲಾ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ, ಈ ಹಿಂದೆ ಇದೇ ಪ್ರಕರಣದಲ್ಲಿ ಜಿಲ್ಲಾ ನ್ಯಾಯಾಲಯದಲ್ಲಿ ಜಾರಿಯಾದ ಜಾಮೀನನ್ನು ಹೈಕೋರ್ಟ್ ರದ್ದುಪಡಿಸಿತ್ತು.

Bengaluru High court

ಸುಪ್ರೀಂ ಕೋರ್ಟ್ ನಲ್ಲಿ ಈ ಆದೇಶವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ  ಸುಪ್ರೀಂ ಕೋರ್ಟ್ ಹೈಕೋರ್ಟ್ ರದ್ದುಪಡಿಸಿದ ಆದೇಶವನ್ನು ಎತ್ತಿ ಹಿಡಿದು ಅರ್ಜಿ ತಿರಸ್ಕರಿಸಿ ಆದೇಶ ಹೊರಡಿಸಿತ್ತು.

ಆರೋಪಿ ಮೊಹಮ್ಮದ್ ರಜೀಮ್ ಹೈಕೋರ್ಟಿನ ಮುಂದೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಮಾನ್ಯ ಹೈಕೋರ್ಟ್ ಈ ಬಾರಿ ಜಾಮೀನು ಅರ್ಜಿಯನ್ನು ಮಾನ್ಯ ಮಾಡಿ ಜಾಮಿನಿನ ಮೇಲೆ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.
ಆರೋಪಿಯ ಪರವಾಗಿ ಹೈಕೋರ್ಹಿಟ್ ರಿಯ ವಕೀಲರಾದ ಅರುಣ್ ಶ್ಯಾಮ್, ಸುಯೋಗ್ ಹೇರಳೆ‌ಮತ್ತು ಮಹಮ್ಮದ್ ಅಸ್ಗರ್ ಮುಡಿಪು ವಾದ ಮಂಡಿಸಿದರು.

Most Popular

Exit mobile version