DAKSHINA KANNADA

ವಿಶೇಷ ಕಾರ್ಯಪಡೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಳ್ಳೆಯ ಫಲಿತಾಂಶ: ಗೃಹ ಸಚಿವ ಪರಮೇಶ್ವರ

Share

ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ಕಚೇರಿಯನ್ನು ಪುತ್ತೂರಿಗೆ ವರ್ಗಾಯಿಸುವ ಚಿಂತನೆ

ಸುಬ್ರಹ್ಮಣ್ಯ: ವಿಶೇಷ ಕಾರ್ಯಪಡೆ ರಚನೆಯಿಂದ ಶಾಂತಿ-ಸುವ್ಯವಸ್ಥೆಗೆ ಪೂರಕವಾಗಿದೆ. ಈ ಬಗ್ಗೆ ಶ್ಲಾಘನೆ ವ್ಯಕ್ತವಾಗಿದೆ. ಬೆಂಗಳೂರು ಬಳಿಕ ಬೆಳೆಯುವಲ್ಲಿ ಅವಕಾಶಗಳಿರುವ ಕರಾವಳಿಯಲ್ಲಿ ಶಾಂತಿ ಅತೀ ಮುಖ್ಯ, ಅದಕ್ಕಾಗಿ ಈ ಭಾಗಕ್ಕೆ ಹೆಚ್ಚು ಗಮನ ಹರಿಸುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು. ಕೇವಲ ಹೇಳಿಯಾಗಿ ನಾನು ಈ ರೀತಿಯಾಗಿ ಹೇಳುತ್ತಿಲ್ಲ ಇತ್ತೀಚೆಗೆ ನಡೆದ ಕಾನ್ಫೆರೆನ್ಸ್ನಲ್ಲಿ ಮುಖ್ಯಮಂತ್ರಿಗಳ ಉಪಸ್ಥಿತಿಯಲ್ಲಿ, ವಿವಿಧ ಅಪರಾಧಗಳ ಬಗ್ಗೆ ಮಾಹಿತಿ ಪಡೆದ ವೇಳೆ ಕ್ರೈಂ ರೇಟ್ ಕಡಿಮೆಯಾಗಿರುವುದು ಕಂಡುಬಂದಿದೆ. ಕಾನೂನುನನ್ನು ಬಹಳ ಕಠಿಣವಾಗಿ ತೆಗೆದುಕೊಂಡಿದ್ದರಿಂದ ಕ್ರೈಂ ರೇಟ್ ಕಡಿಮೆಯಾಗಿದೆ ಎಂದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಗಮನಿಸಿದಾಗ ಕಠಿಣ ಕ್ರಮಕೈಗೊಂಡ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿರಲು ಸಾಧ್ಯವಾಗಿದೆ ಎಂದರು.
ಒಂದೆರಡು ಜನ ಬೇರೆ ರೀತಿಯಲ್ಲಿ ಇದ್ದರೂ ಜಿಲ್ಲೆಯ ಜನ ಉತ್ತಮರಾಗಿರುವವರು ಎಂದರು. ಪೊಲೀಸರ ವರ್ಗಾವಣೆಯಿಂದ ಏನು ಪರಿಣಮ ಎಂದು ನೀವು ಹೇಳಬೇಕು ಎಂದರು.


ಎಲ್ಲರೂ ಚೆನ್ನಾಗಿದ್ದರೆ ಪೊಲೀಸ್‌ನವರು ಯಾಕೆ ? ತಪ್ಪು ಮಾಡಿದವರನ್ನು ಸರಿಪಡಿಸಲು ಪೊಲೀಸ್ ಇಲಾಖೆ ಇದೆ. ಅದಕ್ಕಾಗಿ ಕಾನೂನು, ನಿಯಮಗಳನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದರು. ಮಂಗಳೂರಿನಲ್ಲಿ ಬುಧವಾರ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಎಲ್ಲಾ ವರ್ಗದ ಜನರೊಂದಿಗೆ ಸಭೆ ನಡೆಸುತ್ತೇವೆ. ಅಲ್ಲಿ ಸಲಹೆಗಳನ್ನು ಪಡೆದು ಮುಂದಿನ ಕ್ರಮಕೈಗೊಳ್ಳುತ್ತೇವೆ.
ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ನಿವಾರಿಸಲು ನೇಮಕಾತಿ ನಡೆಯುತ್ತಿದೆ. ೫೪೫ ಎಸೈಗಳಿಗೆ ಆದೇಶ ನೀಡಲಾಗಿದ್ದು, ತರಬೇತಿಗೆ ಹೋಗಿದ್ದಾರೆ. ಇನ್ನೂ ೪೦೨ ಹುದ್ದೆಗೆ ಆದೇಶವಾಗಲಿದೆ. 15 ಸಾವಿರ ಕಾನ್ಸ್ಟೇಬಲ್ ಹುದ್ದೆ ಖಾಲಿ ಇದೆ. ಅದನ್ನು ಭರ್ತಿ ಮಾಡಲು ಕ್ರಮಕೈಗೊಳ್ಳುತ್ತೇವೆ ಎಂದರು. ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಹೊರ ಠಾಣೆ ಬೇಡಿಕೆ ಬಗ್ಗೆ, ಎಸ್ಪಿ ಅವರಿಂದ ಪ್ರಸ್ತಾವನೆ ಬಂದಲ್ಲಿ ಪರಿಶೀಲನೆ ನಡೆಸಿ. ಕ್ರಮಕೈಗೊಳ್ಳುತ್ತೇವೆ ಎಂದರು.

ಪುತ್ತೂರಿಗೆ ಎಸ್ಪಿ ಕಚೇರಿ ಬೇಡಿಕೆ ಇದೆ:

ಮಂಗಳೂರಿನ ಎಸ್ಪಿ ಕಚೇರಿಯನ್ನು ಪುತ್ತೂರಿಗೆ ವರ್ಗಾಯಿಸಬೇಕು ಎಂಬ ಬೇಡಿಕೆ ಇದೆ. ಈ ಬಗ್ಗೆ ಪರಿಶೀಲನೆ ನಡೆಯುತ್ತಿದೆ, ಸಾಧಕ-ಬಾಧಕಗಳನ್ನು ಸಂಗ್ರಹಿಸಿ ತೀರ್ಮಾಣ ಕೈಗೊಳ್ಳುತ್ತೇವೆ – ಗೃಹ ಸಚಿವ ಪರಮೇಶ್ವರ

ಈಗ ಎರಡು ಠಾಣೆಗಳಿಗೆ ಒಂದು112 ಪೊಲೀಸ್ ವಾಹನ ಇದು, ಒಂದು ಠಾಣೆಗೆ ಒಂದು ವಾಹನ ಬೇಕು ಎಂಬ ಬೇಡಿಕೆಯಂತೆ ೧೧೨ವನ್ನು ಹೆಚ್ಚು ಮಾಡುತ್ತೇವೆ. ಕೇಂದ್ರ ಸರಕಾರದ ಆದೇಶದ ಪ್ರಕಾರ ೧೫ ವರ್ಷಗಳಾದ ವಾಹನಗಳನ್ನು ತೆಗೆಯುತ್ತಿದ್ದೇವೆ. ಅಲ್ಲಿಗೆ ಹೊಸ ವಾಹನ ನೀಡಲಾಗುತ್ತಿದೆ. 112 ಉಪಯೋಗ ಜಾಸ್ತಿಯಿದ್ದ, ಆ ವಾಹನವನ್ನೂ ಹೆಚ್ಚು ಮಾಡುತ್ತೇವೆ ಎಂದರು. ಗೃಹರಕ್ಷಕ ದಳದ ಸಿಬ್ಬಂದಿಗಳಿಗೆ ಹೆಚ್ಚಿನ ಸೌಲಭ್ಯ ಒದಗಿಸಬೇಕು ಎಂಬ ಬೇಡಿಕೆ ಬಗ್ಗೆ ಗಮನ ಹರಿಸುತ್ತೇವೆ ಎಂದರು.
ಸ್ವಾಗತ-ಚರ್ಚೆ:
ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಹಾಗೂ ಪ್ರಮುಖರು ಸ್ವಾಗತಿಸಿದರು.

To Top