DAKSHINA KANNADA

ಮಂಗಳೂರು ಜಿಲ್ಲೆ ಮರುನಾಮಕರಣಕ್ಕೆ ಆಡಳಿತಾತ್ಮಕ ಬಲ: ಜಿಪಂ ದಿಶಾ ಸಭೆಯಲ್ಲಿ ನಿರ್ಣಯ

Share

 

ಮಂಗಳೂರು: ದಕ್ಷಿಣ ಕನ್ನಡವನ್ನು ‘ಮಂಗಳೂರು ಜಿಲ್ಲೆ’ಯಾಗಿ ಮರುನಾಮಕರಣಗೊಳಿಸುವ ವಿಷಯ ದ.ಕ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ (ದಿಶಾ) ಸಮಿತಿ ಸಭೆಯಲ್ಲಿಯೂ ಪ್ರಸ್ತಾವಗೊಂಡಿತಲ್ಲದೆ, ಜಿಲ್ಲೆಯ ಶಾಸಕರು, ಸಂಸದರ ಸಮ್ಮತಿಯ ಜಂಟಿ ಪ್ರಸ್ತಾವವನ್ನು ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರಕಾರಕ್ಕೆ ಕಳುಹಿಸಲು ನಿರ್ಣಯಿಸಲಾಯಿತು.

ಈ ಮೂಲಕ ಮಂಗಳೂರು ಜಿಲ್ಲೆ ಮರುನಾಮಕರಣಕ್ಕೆ ಆಡಳಿತಾತ್ಮಕ ಬಲ ಸಿಕ್ಕಿದಂತಾಗಿದೆ.

ಸಂಸದ ಬ್ರಿಜೇಶ್ ಚೌಟ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ದಿಶಾ ಸಭೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರ ವಿಷಯ ಪ್ರಸ್ತಾವಿಸಿದರು.

ಸಭೆಯಲ್ಲಿ ಪ್ರಸ್ತಾಪ ಮಾಡಿದ ಶಾಸಕ ಹರೀಶ್ ಪೂಂಜ

ದ.ಕ. ಜಿಲ್ಲೆಗೆ ಮಂಗಳೂರು ಹೆಸರು ನಾಮಕರಣಗೊಳಿಸುವ ಚರ್ಚೆ ನಡೆಯುತ್ತಿದೆ. ಬೆಂಗಳೂರಿನತಂತೆ ಮಂಗಳೂರು ಕೂಡಾ ಜಾಗತಿಕವಾಗಿ ಗುರುತಿಸಿಕೊಂಡಿದೆ. ಆದ್ದರಿಂದ ದಕ್ಷಿಣ ಕನ್ನಡವನ್ನು ಮಂಗಳೂರು ಜಿಲ್ಲೆಯಾಗಿ ಮರುನಾಮಕರಣಗೊಳಿಸುವ ನಿಣರ್ಯವನ್ನು ಸರಕಾರಕ್ಕೆ ಕಳುಹಿಸುವಂತೆ ಆಗ್ರಹಿಸಿದರು.

ಸಭೆಯಲ್ಲಿದ್ದ ಶಾಸಕರು, ಸಂಸದರು ಸರಕಾರಕ್ಕೆ ದಿಶಾ ಸಭೆಯಲ್ಲಿ ಕೈಗೊಂಡ ಜಂಟಿ ಪ್ರಸ್ತಾವದ ನಿರ್ಣಯ ಸಲ್ಲಿಸಲು ನಿರ್ಧರಿಸಿದರು.

To Top