CRIME NEWS
ಶರಣ್ ಪಂಪುವೆಲ್ ವಿರುದ್ಧ ಬಂಧನ ಸಹಿತ ಬಲವಂತದ ಕ್ರಮ ಬೇಡ: ಹೈಕೋರ್ಟ್
ಅರುಣ್ ಶ್ಯಾಂ ವಾದಮಂಡನೆ
ಬೆಂಗಳೂರು: ಪ್ರಚೋದನಾಕಾರಿ ಹೇಳಿಕೆ ಕೇಸ್ ಗೆ ಸಂಬಂಧಿಸಿ ವಿಎಚ್‌ಪಿ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಬಂಧನ ಸೇರಿದಂತೆ ಬಲವಂತದ ಕ್ರಮ ಕೈಗೊಳ್ಳದಂತೆ ಉಡುಪಿ ಪೊಲೀಸರಿಗೆ ಹೈಕೋರ್ಟ್ ಆದೇಶಿಸಿದೆ.
ಎಫ್ಐಆರ್ ರದ್ದು ಕೋರಿ ಶರಣ್ ಪಂಪ್ ವೆಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಸ್.ಆರ್.ಕೃಷ್ಣ ಕುಮಾರ್ ಅವರಿದ್ದ ಪೀಠ, ಬಲವಂತದ ಕ್ರಮ ತೆಗೆದುಕೊಳ್ಳದಂತೆ ಆದೇಶಿಸಿದ್ದು, ಪೊಲೀಸರೊಂದಿಗೆ ವಿಚಾರಣೆಗೆ ಸಹಕರಿಸುವಂತೆ ಶರಣ್ ಪಂಪುವೆಲ್ ಗೆ ಸೂಚಿಸಿದೆ.
ಶರಣ್ ಪಂಪ್ ವೆಲ್ ವಿರುದ್ಧ ವಿನಾಕಾರಣ ದ್ವೇಷ ಭಾಷಣದ ಆರೋಪ ಹೊರಿಸಲಾಗಿದೆ. ಹೀಗಾಗಿ ಪ್ರಕರಣಕ್ಕೆ ತಡೆಯಾಜ್ಞೆ ನೀಡುವಂತೆ ಅರ್ಜಿದಾರರ ಪರವಾಗಿ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ವಾದಿಸಿದ್ದರು.