CRIME NEWS

ಯುವತಿಯ ಮೃತದೇಹ ಮನೆಯ ಕೆರೆಯಲ್ಲಿ ಪತ್ತೆ

Posted on

Share
ಬೆಳ್ತಂಗಡಿ : ಅನುಮಾನಸ್ಪದ ರೀತಿಯಲ್ಲಿ ಯುವತಿಯೊಬ್ಬಳ ಮೃತದೇಹ ಮನೆಯ ಕೆರೆಯಲ್ಲಿ ಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲಿನಲ್ಲಿ ಶುಕ್ರವಾರ ನಡೆದಿದೆ.
ಬೆಳಾಲು ಗ್ರಾಮದ ಕುಕ್ಕೊಟ್ಟು ನಿವಾಸಿ ನಾಗೇಶ್ ಎಂಬವರ ಮಗಳು ವೀಣಾ(19) ಎಂಬಾಕೆಯ ಶವ ಮನೆಯ ಸಮೀಪದ ಕೆರೆಯಲ್ಲಿ ಜುಲೈ 11 ರಂದು ಮಾದ್ಯಾಹ್ನದ ವೇಳೆ ಪತ್ತೆಯಾಗಿದೆ.
ಈಕೆಗೆ ಮಾನಸಿಕ ಖಾಯಿಲೆ ಇದ್ದು ಪತ್ತೂರಿನ ಆಸ್ಪತ್ರೆಯ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ. ವೀಣಾಗೆ ಒಂದುವರೆ ತಿಂಗಳ ಮಗು ಇದ್ದು, ಈಕೆಯ ಅನಾರೋಗ್ಯದ ಕಾರಣದಿಂದ ಮಗುವನ್ನು ಸುಬ್ರಹ್ಮಣ್ಯ ಸಂಬಂಧಿಗಳ ಮನೆಯಲ್ಲಿ ಬಿಟ್ಟಿದ್ದೆವು. ಎಂದಿನಂತೆ ಮನೆಯಲ್ಲಿದ್ದ ಆಕೆ ಇದ್ದಕ್ಕಿದ್ದಂತೆ ಮನೆಯಿಂದ ನಾಪತ್ತೆಯಾಗಿದ್ದಳು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಲು ನಾಗೇಶ್ ಹೋಗಿದ್ದರು. ಈ ವೇಳೆ ಮನೆಯವರು ಹುಡುಕಾಟ ನಡೆಸಿದಾಗ ಕೆರೆಯಲ್ಲಿ ಮೃತದೇಹವಿರುವುದು ಪತ್ತೆಯಾಗಿದೆ. ಬಳಿಕ ರಾತ್ರಿ ಅಗ್ನಿಶಾಮಕ ದಳದವರು ಮತ್ತು ಶೌರ್ಯ ವಿಪತ್ತು ತಂಡದವರು ಸೇರಿ ಮೃತದೇಹ ಹೊರತೆಗೆದಿದ್ದಾರೆ ಎಂದು ಯುವತಿಯ ತಂದೆ ನಾಗೇಶ್ ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಎಫ್ಎಸ್ಎಲ್ ವಿಭಾಗದ ಸೋಕೋ ಸಿಬ್ಬಂದಿ ಅರ್ಪಿತಾ ,ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ, ಧರ್ಮಸ್ಥಳ ಪೊಲೀಸರು, ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವೀಣಾ ಮೃತದೇಹವನ್ನು ಮಂಗಳೂರು ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ಶವಪರೀಕ್ಷೆಗಾಗಿ ಸಾಗಿಸಲಾಗಿದೆ.
ಈಕೆಯ ಸಾವಿನ ಬಗ್ಗೆ ಹಲವು ಅನುಮಾನಗಳಿದ್ದು, ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Most Popular

Exit mobile version