ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ, ದೂರುದಾರ ಸಾಕ್ಷಿಗೆ ಸಾಕ್ಷಿ ರಕ್ಷಣೆ ನೀಡಲು ಜಿಲ್ಲಾ ಅಧಿಕಾರಿಗಳು ಅನುಮೋದನೆ ನೀಡಿದ್ದು, ಶುಕ್ರವಾರ ಸಂಜೆಯಿಂದ ತಕ್ಷಣದಿಂದ ಜಾರಿಗೆ ಬರಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಆದರೆ, ದೂರುದಾರ ಸಾಕ್ಷಿಯ ಗುರುತಿನ ಉಲ್ಲಂಘನೆಯ ಬಗ್ಗೆ ಕಳವಳಗಳು ಹುಟ್ಟಿಕೊಂಡಿವೆ. ವ್ಯಕ್ತಿಯ ಅನಾಮಧೇಯತೆಯನ್ನು ಕಾಪಾಡುವ ಪ್ರಯತ್ನಗಳ ಹೊರತಾಗಿಯೂ, ದೂರುದಾರ ಸಾಕ್ಷಿಯ ಪ್ರತಿನಿಧಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಂಚಿಕೊಂಡ ಪ್ರತಿಕಾ ಪ್ರಕಟಣೆ ಮತ್ತುಎಫ್.ಐ.ಆರ್ ಪ್ರತಿಯನ್ನು ಮಾಧ್ಯಮಗಳಿಗೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ನೀಡುವ ಮೂಲಕ, ಸಾಕ್ಷಿ ದೂರುದಾರರ ವಯಸ್ಸು, ವೃತ್ತಿಯ ಸ್ಥಳ, ಚಹರೆ, ವೃತ್ತಿಯಲ್ಲಿದ್ದ ಅವಧಿ, ಸಮುದಾಯ ಮತ್ತು ಇತರೆ ಮಾಹಿತಿಗಳ ವಿವರಗಳು ಸೇರಿವೆ. ಈ ವಿವರಗಳು ಅನೇಕ ಸ್ಥಳೀಯರಿಗೆ ದೂರುದಾರ ಸಾಕ್ಷಿಯ ಗುರುತನ್ನು ಊಹಿಸಲು ಅನುವು ಮಾಡಿಕೊಟ್ಟಿವೆ.
ಇದಕ್ಕೆ ಪ್ರತಿಕ್ರಿಯೆಯಾಗಿ, ಅಧಿಕಾರಿಗಳು ಎಲ್ಲಾ ಅಧಿಕೃತ ಉದ್ದೇಶಗಳಿಗಾಗಿ ಸಾಕ್ಷಿಯ ಗುರುತನ್ನು ಬಹಿರಂಗಪಡಿಸದಿರಲು ನಿರ್ಧರಿಸಿದ್ದಾರೆ. ಏತನ್ಮಧ್ಯೆ, ಬಂಟ್ವಾಳ ಡಿವೈಎಸ್ಪಿ ಅವರ ಮೇಲ್ವಿಚಾರಣೆಯಲ್ಲಿ ಗುರುತಿನ ಉಲ್ಲಂಘನೆಯ ಬಗ್ಗೆ ಪ್ರತ್ಯೇಕ ತನಿಖೆಯನ್ನು ಪ್ರಾರಂಭಿಸಲಾಗಿದೆ.
ಶುಕ್ರವಾರ, ದೂರುದಾರ ಸಾಕ್ಷಿಯು ತನ್ನ ಹೇಳಿಕೆಯನ್ನು ದಾಖಲಿಸಲು ಬೆಳ್ತಂಗಡಿ ನ್ಯಾಯಾಲಯದ ಮುಂದೆ ಹಾಜರಾದರು. ವಿಚಾರಣೆಯ ಸಮಯದಲ್ಲಿ, ಸಾಕ್ಷಿಯು ತಾನು ವೈಯಕ್ತಿಕವಾಗಿ ಹೊರತೆಗೆದಿರುವುದಾಗಿ ಹೇಳಿಕೊಂಡ ಅಸ್ಥಿಪಂಜರದ ಅವಶೇಷಗಳನ್ನು ಸಹ ಹಾಜರುಪಡಿಸಿದರು. ಸಾಕ್ಷಿ ದೂರುದಾರರ ಪರ ವಕೀಲರು ಹಾಗೂ ಪಂಚರ ಸಮ್ಮುಖದಲ್ಲಿ ಪೊಲೀಸರು ಸ್ವಾಧೀನಕ್ಕೆ ಪಡೆದುಕೊಂಡಿದ್ದು, ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.