CRIME NEWS

ಡ್ರಗ್ಸ್ ಸಪ್ಲೈ ಕಲ್ಬುರ್ಗಿಯ ಕಾಂಗ್ರೆಸ್ ಮುಖಂಡ ಸೆರೆ

Posted on

Share

ಗುಲ್ಬರ್ಗ:  ಸಪ್ಲೈ ಪ್ರಕರಣದಲ್ಲಿ ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ್ ಕಣ್ಣಿ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಆಪ್ತ ಎಂದು ಗುರುತಿಸಲ್ಪಟ್ಟಿರುವ ಲಿಂಗರಾಜ್ ಕಣ್ಣಿ, ನಿಷೇಧಿತ 120ಕ್ಕೂ ಹೆಚ್ಚು ಎನ್‌ ರೆಕ್ಸ್ ಬಾಟಲ್‌ಗಳನ್ನು ಸಾಗಿಸುತ್ತಿದ್ದ ವೇಳೆ ಬಜಾರ್‌ ಪೇಠ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಈ ಪ್ರಕರಣದಲ್ಲಿ ತೌಸಿಫ್‌ ಆಸಿಫ್ ತುರವೇ ಪ್ರಮುಖ ಆರೋಪಿಯಾಗಿದ್ದು, ಲಿಂಗರಾಜ್ ಕಣ್ಣಿ ಮತ್ತು ಕಲಬುರಗಿಯ ಸಯ್ಯದ್ ಇರ್ಫಾನ್ ನನ್ನು ಬಂಧಿಸಲಾಗಿದೆ.
ಮುಂಬೈನ ಬಜಾರ್‌ ಪೇಠ ಪೊಲೀಸರು ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಈ ಘಟನೆ ಕಲಬುರಗಿ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ.
ಹೆಚ್ಚಿನ ತನಿಖೆ ನಡೆಯುತ್ತಿದ್ದು, ಈ ಪ್ರಕರಣದ ಕುರಿತು ಮುಂಬೈ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

Most Popular

Exit mobile version