ಈ ಸಮಯದ ದೊಡ್ಡ ಬ್ರೇಕಿಂಗ್ ಸುದ್ದಿ ಇದು
ನೂರಾರು ಹೆಣ ಹೋತಿದ್ದೇನೆ ಎಂದು ದೂರು ನೀಡಿದ ಅಜ್ಞಾತ ವ್ಯಕ್ತಿಯು ಸಮಾಧಿ ಆಗಿರುವ ಪ್ರಕ್ರಿಯೆ ಮುಗಿಯುತ್ತಿದ್ದಂತೆ ತಲೆಮರೆಸಿಕೊಳ್ಳುವ ಸಾಧ್ಯತೆ ಇದೆ ಎಂಬ ಗುಪ್ತ ಮಾಹಿತಿ ಲಭಿಸಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆ ಎಸ್ಪಿ ಹೇಳುವ ಮೂಲಕ ಈ ಪ್ರಕರಣದಲ್ಲಿ ದೂರುದಾರನ ವರ್ತನೆಯ ಬಗ್ಗೆ ಸಂಶಯ ದಟ್ಟವಾಗಿದೆ.
ಈ ನಡುವೆ ತನಿಖಾಧಿಕಾರಿಯವರು ಅಜ್ಞಾತ ದೂರುದಾರ ಬ್ರೈನ್ ಮ್ಯಾಪಿಂಗ್ ನಡೆಸಲು ಸಿದ್ಧತೆ ನಡೆಸಿರುವುದು ಕೂಡ ದೂರುದಾರ ವರ್ತನೆ ಸಂಶಯ ಮೂಡಲು ಕಾರಣವಾಗಿರಬಹುದು.
ಮಂಗಳೂರು: ಧರ್ಮಸ್ಥಳದಲ್ಲಿ ಸಮಾಧಿ ಅಗೆಯುವ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಸಾಕ್ಷಿ ದೂರುದಾರನು ತಲೆಮರೆಸಿಕೊಳ್ಳುವ ಸಾಧ್ಯತೆಯಿದೆ ಎಂದು ಸ್ಥಳೀಯ ವ್ಯಕ್ತಿಗಳಿಂದ ಗುಪ್ತ ಮಾಹಿತಿ ದೊರಕಿರುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಎಸ್ಪಿ ಡಾ.ಅರುಣ್ ಕೆ ತಿಳಿಸಿದ್ದಾರೆ.

ಧರ್ಮಸ್ಥಳದಲ್ಲಿ ಅನೇಕ ಹೆಣಗಳನ್ನು ಹೂತಿದ್ದೇನೆ ಎಂದು ಹೇಳಿಕೊಂಡ ವ್ಯಕ್ತಿ ಬೆಳ್ತಂಗಡಿ ಕೋರ್ಟಿಗೆ ವಕೀಲರ ಜೊತೆ ಹಾಜರಾಗಿದ್ದಾನೆ
ಈ ಕುರಿತು ಪತ್ರಿಕಾ ಪ್ರಕಟನೆ ಹೊರಡಿಸಿರುವ ಅವರು, ತನಿಖಾ ಪ್ರಕ್ರಿಯೆಯನ್ನು ಅನುಸರಿಸದೆ ಸಮಾಧಿ ಅಗೆಯುವ ಪ್ರಕ್ರಿಯೆಯನ್ನು ನಡೆಸಲು ಆತುರ ತೋರುತ್ತಿರುವಂತೆ ಸುದ್ದಿ ಹರಿದಾಡುತ್ತಿದೆ. ಸಮಾಧಿ ಅಗೆಯುವ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಸಾಕ್ಷಿ ದೂರುದಾರನು ತಲೆಮರೆಸಿಕೊಳ್ಳುವ ಸಾಧ್ಯತೆಯಿದೆ. ಈ ವಿಷಯವನ್ನು ಸಾಕ್ಷಿದಾರರ ಪರವಾದ ವಕೀಲರಿಗೂ ತಿಳಿಸಲಾಗಿದೆ. ಸಾಧ್ಯತೆಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆಯಾಗಿದ್ದು ಈ ಬಗ್ಗೆ ತನಿಖಾಧಿಕಾರಿ ಗಳಿಗೆ ಇತ್ತೀಚೆಗೆ ಮಾಹಿತಿ ಬಂದಿದೆ. ಈ ವಿಚಾರವನ್ನು ತನಿಖಾಧಿಕಾರಿಯವರ ಗಮನಕ್ಕೆ ಸಾಕ್ಷಿ ದೂರುದಾರನ ಪರ ವಕೀಲರು ತಂದಿರುವುದಿಲ್ಲ. ಸಾಕ್ಷಿ ದೂರು ದಾರರು ಸಮ್ಮತಿಸಿದಲ್ಲಿ ಆತನ ಬ್ರೈನ್ ಮಾಪಿಂಗ್, ಫಿಂಗರ್ ಪ್ರಿಂಟ್ , ನಾರ್ಕೋ ಅನಾಲಿಸಿಸ್ ಪರೀಕ್ಷೆಗಳನ್ನು ನಡೆಸಲು ತನಿಖಾಧಿಕಾರಿಗಳು ಮಾನ್ಯ ನ್ಯಾಯಾಲಯಕ್ಕೆ ವರದಿಯನ್ನು ಸಲ್ಲಿಸಿದ್ದಾರೆ.
ತನಿಖಾಧಿಕಾರಿ ತನಿಖೆಯ ಯಾವ ಹಂತದಲ್ಲಿ ಸಮಾಧಿ ಅಗೆಯುವ ಪ್ರಕ್ರಿಯೆ ಸೂಕ್ತವೆಂದು ನಿರ್ಧರಿಸು ತ್ತಾರೋ ಆಗ ಸೂಕ್ತ ಕಾನೂನು ಪ್ರಕ್ರಿಯೆ ಅನುಸರಿಸಿಕೊಂಡು ಸಮಾಧಿ ಅಗೆಯುವ ಪ್ರಕ್ರಿಯೆ ನಡೆಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
