DAKSHINA KANNADA

ಕಾಂಗ್ರೆಸ್ ಮುಖಂಡ ಜನಾರ್ದನ ಚೆಂಡ್ತಿಮಾರ್ ನಿಧನ

Posted on

Share

ಬಂಟ್ವಾಳ: ಬಂಟ್ವಾಳ ಪುರಸಭಾ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಜನಾರ್ದನ ಚಂಡ್ತಿಮಾರ್ (55) ಸೋಮವಾರ ಬೆಳಗಿನ ಜಾವ ನಿಧನ ಹೊಂದಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಪತ್ನಿ,  ಪುತ್ರ ಇದ್ದಾರೆ.

ಆದಿದ್ರಾವಿಡ ಸಮುದಾಯದ ಮುಖಂಡರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರಾಗಿ ಗುರುತಿಸಿಕೊಂಡಿದ್ದ ಚಂಡ್ತಿಮಾರ್, ಬಂಟ್ವಾಳ ಪುರಸಭೆಯ ಸದಸ್ಯರಾಗಿ ಶೋಷಿತರ ಪರ ಧ್ವನಿ ಎತ್ತುತ್ತಿದ್ದರು.

ಜನಾರ್ದನ ಚೆಂಡ್ತಿಮಾರ್ ರವರ ಅಗಲುವಿಕೆಯು ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಸಮುದಾಯಕ್ಕೆ  ನಷ್ಟ ಉಂಟಾಗಿದೆ. ಜಿಲ್ಲೆಯ ಒಬ್ಬ ಸಮುದಾಯ ಮತ್ತು ಪಕ್ಷವನ್ನು ಮುನ್ನಡೆಸುವ ಮುಖಂಡರನ್ನು ಕಳೆದುಕೊಂಡಿದ್ದೇವೆ. ಇವರ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲೆಂದು ಭಾವಪೂರ್ಣ ಶ್ರದ್ದಾಂಜಲಿಯನ್ನು ಸಮರ್ಪಿಸುತ್ತೇನೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ  ತಮ್ಮ ಆಪ್ತ ಮುಖಂಡರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಚಂಡ್ತಿಮಾರ್

Most Popular

Exit mobile version