CRIME NEWS
ಧರ್ಮಸ್ಥಳ ಬೆಳಾಲು ಕೆರೆಯಲ್ಲಿ ಯುವತಿಯ ಮೃತದೇಹ: ತನಿಖೆಗೆ ಜನವಾದಿ ಸಂಘಟನೆ ಆಗ್ರಹ
ಧರ್ಮಸ್ಥಳ: ಇಲ್ಲಿಗೆ ಸಮೀಪದ ಬೆಳ್ಳಾಲು ಎಂಬಲ್ಲಿ ಹದಿಹರೆಯದ ಯುವತಿ ಒಬ್ಬಳ ಮೃತ ದೇಹ ಕೆರೆಯಲ್ಲಿ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಮಾನಸಿಕ ಅಸ್ವಸ್ಥೆಯಾಗಿದ್ದ ಯುವತಿಯ ಅಸಹಜ ಸಾವಿನ ಬಗ್ಗೆ ಅನುಮಾನ ಹುಟ್ಟಿಸಿರುವ ಹಿನ್ನೆಲೆಯಲ್ಲಿ ಈ ಕುರಿತು ಸಮಗ್ರ ತನಿಖೆಗೆ ಜನವಾದಿ ಮಹಿಳಾ ಸಂಘಟನೆ ಆಗ್ರಹಿಸಿದೆ.
ಕುಕ್ಕೊಟ್ಟುವಿನ ವೀಣಾ(19 ) ಜುಲೈ 11 ರಂದು ಮನೆಯ ಪಕ್ಕದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಳು.
ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕುಕ್ಕೊಟ್ಟು ನಿವಾಸಿ ನಾಗೇಶ್- ಭಾರತಿ ದಂಪತಿಗಳ ಎರಡನೇ ಪುತ್ರಿ ವೀಣಾ, ಮೇ10ರಂದು ನಾಪತ್ತೆಯಾಗಿದ್ದರು. ಈ ಬಗ್ಗೆ ನಾಪತ್ತೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆಕೆಯ ಪತ್ತೆಗಾಗಿ ಪ್ರಕಟಣೆ ಹೊರಡಿಸಿದ್ದರು. ಕೆಲವೇ ದಿನಗಳಲ್ಲಿ ವೀಣಾ ಪತ್ತೆಯಾಗಿದ್ದರು. ಬಳಿಕ ಅವರು ಮನೆಯಲ್ಲಿಯೇ ವಾಸದ್ದರು. ಈಗ ವೀಣಾ ಅವರ ಶವ ಕೆರೆಯಲ್ಲಿ ಪತ್ತೆಯಾಗಿದ್ದು ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದೆ.
ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ವೀಣೆಗೆ ಪುತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ವೀಣಾಗೆ ಒಂದೂವರೆ ತಿಂಗಳ ಮಗು ಇದ್ದು ಈಕೆಯ ಅನಾರೋಗ್ಯದ ಕಾರಣದಿಂದ ಮಗುವನ್ನು ಸುಬ್ರಹ್ಮಣ್ಯ ಸಂಬಂಧಿಗಳ ಮನೆಯಲ್ಲಿ ಬಿಡಲಾಗಿತ್ತಯ ಎಂದು ಮನೆಯವರು ತಿಳಿಸಿದ್ದಾರೆ.
ಧರ್ಮಸ್ಥಳ ಪೊಲೀಸ್ ಠಾಣೆಗೆ ತಂದೆ ದೂರು ನೀಡಲು ಹೋಗಿದ್ದ ವೇಳೆ, ಮನೆಯವರು ಅಷ್ಟರಲ್ಲಿ ಹುಡುಕಾಟ ನಡೆಸಿದಾಗ ಕೆರೆಯ ನೀರಿನ ಆಳವಾದ ಭಾಗದಲ್ಲಿ ವೀಣಾಳ ಮೃತದೇಹ ಪತ್ತೆಯಾಗಿತ್ತು.
ಬಳಿಕ ಅಗ್ನಿಶಾಮಕ ಮತ್ತು ತಂಡದವರು ಸೇರಿ ಮೃತದೇಹ ಹೊರತೆಗೆದಿದ್ದಾರೆ.
ಕೆರೆಯ ಆಳದಲ್ಲಿ ವೀಣಾಳ ಮೃತದೇಹ ಇರುವುದು ಗೊತ್ತಾಗಿದ್ದು ಹೇಗೆ? ಈ ಅಸಹಜ ಸಾವಿನ ಹಿಂದೆ ಹಲವು ಅನುಮಾನಗಳಿದ್ದು ಸಮಗ್ರ ತನಿಖೆ ನಡೆಸುವಂತೆ ಜನ ವಾದಿ ಮಹಿಳಾ ಸಂಘಟನೆ ಆಗ್ರಹಿಸಿದೆ.
ಬಾಣಂತಿಯಾದ ಈಕೆಯ ಮಗುವನ್ನು ಅವಳಿಂದ ದೂರ ಮಾಡಿ ಆಕೆಯ ತಂದೆ ನಾಗೇಶ್ ರವರು ಆಕೆಯನ್ನು ಮಾನಸಿಕ ಅಸ್ವಸ್ಥೆ ಎಂದು ಬಿಂಬಿಸುವ ಕಾರ್ಯವನ್ನು ಮಾಡಿದ್ದಾರೆ ಎಂದು ಜನವಾದಿ ಸಂಘಟನೆ ಆರೋಪಿಸಿದೆ.