DAKSHINA KANNADA

ಗಣಿ ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ: ಸೆಂಥಿಲ್

Share

ಮಂಗಳೂರು: ಶಾಸಕ ಜನಾರ್ದನ ರೆಡ್ಡಿವಿರುದ್ಧ ತಮಿಳುನಾಡಿನ ಕಾಂಗ್ರೆಸ್‌ ಸಂಸದ ಸಸಿಕಾಂತ್ ಸೆಂಥಿಲ್ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಧರ್ಮಸ್ಥಳ ʻಬುರುಡೆʼಪ್ರಕರಣದಲ್ಲಿ ತಮ್ಮ ಹೆಸರು ಪ್ರಸ್ತಾಪಿಸಿ ಆರೋಪ ಮಾಡಿದ್ದಕ್ಕಾಗಿ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ಹೂಡಿರುವುದಾಗಿ ಸೆಂಥಿಲ್‌ ಹೇಳಿದ್ದಾರೆ. 42 ಎಸಿಎಂ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಪಿಸಿಆರ್ ಫೈಲ್‌ ಮಾಡಿದ್ದು, ಸೆಪ್ಟೆಂಬರ್‌ 11ಕ್ಕೆ ವಿಚಾರಣೆ ನಡೆಯಲಿದೆ. ಇದನ್ನೂ

ಬುರುಡೆ ಪ್ರಕರಣದಲ್ಲಿ ನನ್ನ ಹೆಸರು ತಗೊಂಡಿದ್ದಾರೆ. ಆದ್ದರಿಂದ ಮೊಕದ್ದಮೆ ಹೂಡಿದ್ದೇನೆ. ಅವರು ಕೋರ್ಟ್‌ನಲ್ಲಿ ಉತ್ತರಿಸಲಿ

– ಸಸಿ ಕುಮಾರ್ ಸೆಂಥಿಲ್

ಈ ಕೇಸಲ್ಲಿ ನನ್ನ ಹೆಸರು ಯಾಕೆ ಬಂತು, ಗೊತ್ತಿಲ್ಲ. ನನ್ನ ಹೆಸರನ್ನ ತಮಿಳುನಾಡಿನ ಮಾಜಿ ಪೊಲೀಸ್ ಅಧಿಕಾರಿ ಅಲ್ಲಿ ತಗೊಂಡಿದ್ದಾರೆ. ಇದು ಹೀಗೆ ಬಿಟ್ಟರೆ, ಒಂದು ಸ್ಟೋರಿ ಸೃಷ್ಟಿ ಆಗುತ್ತೆ. ನಾನು ಕಾನೂನು ವ್ಯವಸ್ಥೆಯ ಅಡಿ ಹೋಗುತ್ತಿದ್ದೇನೆ. ಸತ್ಯ ಏನಿದೆ ತನಿಖೆಯಿಂದ ಹೊರ ಬರಲಿ ಎಂದು ಒತ್ತಾಯಿಸಿದ್ದಾರೆ.

To Top