CRIME NEWS
ಹುಡುಗರಿಗೆ ಸ್ಕೂಟರ್ ಕೊಟ್ಟ ಪರಿಣಾಮ 4 ಮಕ್ಕಳನ್ನು ಕಳೆದುಕೊಂಡ ಪೋಷಕರು
ಮೈಸೂರು: ಚಾಮರಾಜನಗರದಲ್ಲಿ ಶನಿವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮೂವರು ಮಕ್ಕಳು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ನಡೆದಿದ್ದು, ಅಪ್ರಾಪ್ತ ಬಾಲಕರಿಗೆ ಸ್ಕೂಟರ್ ನೀಡಿದ ಪರಿಣಾಮ ಇದೀಗ ಪೋಷಕರು ತಮ್ಮ ಮಕ್ಕಳನ್ನು ಕಳೆದುಕೊಳ್ಳಬೇಕಾಗಿದೆ.

ಸರಣಿ ಅಪಘಾತದಲ್ಲಿ 10 ವರ್ಷದ ಮೆರಾನ್ ನಿನ್ನೆ ಸ್ಥಳದಲ್ಲೇ ಮೃತಪಟ್ಟಿದ್ದ. ಮೂವರ ಸ್ಥಿತಿ ಗಂಭೀರವಾಗಿತ್ತು. ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ರೆಹಾನ್, ಅದಾನ್ ಪಾಷಾ ಮತ್ತು ಫೈಜಲ್ ಮೃತಪಟ್ಟಿದ್ದಾರೆ.
ಈದ್ ಹಬ್ಬ ಸಂಭ್ರಮ ಮನೆ ಮಾಡಿತ್ತು. ಎಲ್ಲರೂ ನಮಾಜ್ ಮಾಡ್ಕೊಂಡು ಹಬ್ಬವನ್ನ ಆಚರಿಸಿದರು. ಶನಿವಾರವಾದ ಕಾರಣ ಶಾಲೆಗೆ ಹೋಗಿರ್ಲಿಲ್ಲ. ಸೋಮವಾರ ಶಾಲೆಗೆ ಹೋಗೋಣ ಅಂತ ಡಿಸೈಡ್ ಮಾಡಿದ್ದರು ಮೆರಾನ್ ಹಾಗೂ ಆತನ ಸಹೋದರ ಹಾಗೂ ಇಬ್ಬರು ಸ್ನೇಹಿತರು. ಒಟ್ಟು ನಾಲ್ವರು ಟಿವಿಎಸ್ ಎಕ್ಸ್ ಎಲ್ ಬೈಕ್ ತೆಗೆದುಕೊಂಡು ಗಾಳಿಪುರದ ಬಳಿ ಇರುವ ಔಟರ್ ರಿಂಗ್ ರಸ್ತೆಗೆ ಬಂದಿದ್ದು, ಹೈವೆಯಲ್ಲಿ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದರು. ಬೈಕ್ ಹಿಂದೆಯೇ ಇದ್ದ ಕಾರು ಕೂಡ ಲಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಬೈಕ್ನಲ್ಲಿದ್ದ ನಾಲ್ವರು ಸಹ ಹೆಲ್ಮೆಟ್ ಹಾಕಿರ್ಲಿಲ್ಲ, ಪರಿಣಾಮ ನಾಲ್ವರಿಗೂ ಹೆಡ್ ಇಂಜ್ಯುರಿಯಾಗಿ ಮೃತಪಟ್ಟಿದ್ದಾರೆ.