CRIME NEWS

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು

Share

ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ 32 ಕ್ರಿಮಿನಲ್ ಕೇಸ್ ಹೊಂದಿರುವ ಮಹೇಶ್ ಶೆಟ್ಟಿ ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಲಾಗಿದೆ.


ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಅವರು ಈ ಸಂಬಂಧ ಆದೇಶ ಹೊರಡಿಸಿದ್ದು, ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಒಂದು ವರ್ಷದ ಅವಧಿಗೆ ಜಿಲ್ಲೆಯ ಹೊರಗೆ ಕಳುಹಿಸಲಾಗಿದೆ.

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಸುಮಾರು 32ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಕಾನೂನು ಉಲ್ಲಂಘನೆ, ಅಶಾಂತಿ ಸೃಷ್ಟಿ ಹಾಗೂ ಸಮಾಜದಲ್ಲಿ ಅಸ್ಥಿರತೆ ಉಂಟುಮಾಡುವ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಕ್ಕಾಗಿ ಗಡಿಪಾರು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಿಮರೋಡಿ ಮೇಲೆ ಧರ್ಮಸ್ಥಳ ‘ಬುರುಡೆ ಪ್ರಕರಣ’ ಹಾಗು ‘ಶವ ಹೂತಿಟ್ಟ ಪ್ರಕರಣ’ಗಳಲ್ಲಿ ಆರೋಪಿಯಾಗಿದ್ದ ಚೆನ್ನಯ್ಯನಿಗೆ ಆಶ್ರಯ ನೀಡಿದ್ದ ಆರೋಪ ಇದೆ.
ಸೌಜನ್ಯ ಹೋರಾಟ ಸೇರಿದಂತೆ ಹಲವು ಶಾಂತಿ ಕದಡುವ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರ ಹಿನ್ನೆಲೆ, ಸಾರ್ವಜನಿಕ ಶಾಂತಿ ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಬಹುಶಹ ಎಸ್ಐಟಿ ತನಿಖೆಗಳಲ್ಲಿ ನೂರಾರು ಶವ ಹೂತ ಪ್ರಕರಣದ ಬಗ್ಗೆ ತನಿಖೆ ನಡೆಸುವುದು ಆ ಪ್ರಕರಣದಲ್ಲಿ ಯಾವುದೇ ಹುರುಳು ಇಲ್ಲ ಎಂಬುದಾಗಿ ಪ್ರಕರಣ ತನಿಖೆ ನಡೆಸಿ ಕ್ಲೋಸ್ ಮಾಡುವ ಸಾಧ್ಯತೆ ಇದೆ.
ಈ ಪ್ರಕರಣದ ಷಡ್ಯಂತ್ರ ಹೂಡಿದ ಕುರಿತು ಬುರುಡೆ ಚಿನ್ನಯ್ಯ ಕೋರ್ಟಿನಲ್ಲಿ ತಪ್ಪು ಒಪ್ಪಿಗೆ ಸ್ವ ಇಚ್ಛಾ ಹೇಳಿಕೆ ನೀಡುವ ಸಾಧ್ಯತೆ ಇದೆ.
ಇದಾದ ಬಳಿಕ ಆ ಪ್ರಕರಣದ ಷಡ್ಯಂತ್ರದ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸುವ ಬಂಧಿಸುವ ಸಾಧ್ಯತೆಗಳು ಇದೆಯೋ ಎನ್ನುವುದು ಸ್ಪಷ್ಟವಾಗಿಲ್ಲ.
ಅದಲ್ಲದೆ ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಹೂಡಿದ ಪ್ರಕರಣವಾಗಿ ತನಿಖೆ ನಡೆಸುವ ಸಾಧ್ಯತೆ ಕ್ಷೀಣಿಸಿದೆ.

ಈ ನಿಟ್ಟಿನಲ್ಲಿ ಒಟ್ಟಾರೆ ಸಮಾಧಾನಕರ ಅಂತ್ಯ ಕಾಣುವ ನಿಟ್ಟಿನಲ್ಲಿ ತಿಮರೋಡಿಯವರ ಒಟ್ಟಾರೆ ಕ್ರಿಮಿನಲ್ ಪ್ರಕರಣಗಳ ಲೆಕ್ಕಾಚಾರ ಹಾಕಿ ಗಡಿಪಾರು ಮಾಡಲಾಗುತ್ತಿದೆ ಎನ್ನಲಾಗಿದೆ.

 

 

To Top