CRIME NEWS

ಡಿಜಿಟಲ್ ಅರೆಸ್ಟ್ ನಿಂದ ವೃದ್ಧ ದಂಪತಿಯ ರಕ್ಷಿಸಿದ ಬ್ಯಾಂಕ್ ಮ್ಯಾನೇಜರ್ ವೃದ್ಧ ದಂಪತಿಯ 84 ಲಕ್ಷ ರೂ ಉಳಿಸಿದ ಬ್ಯಾಂಕ್ ಮ್ಯಾನೇಜರ್

Posted on

Share

 

 

 

  • ಮಂಗಳೂರು: ನಕಲಿ ಸಿಐಡಿ ಆಫೀಸರ್ ಗಳೆಂದು ಹೇಳಿ ವಿರುದ್ಧ ದಂಪತಿಯನ್ನು ಡಿಜಿಟಲ್ ಅರೆಸ್ಟ್ ಮಾಡಿ ಕೋಟಿ ರೂ ಪಡೆಯುವ ಕೊನೆಯ ಹಂತದಲ್ಲಿ ಬ್ಯಾಂಕ್ ಮ್ಯಾನೇಜರ್ ತಪ್ಪಿಸಿದ್ದಾರೆ
    ಮುಲ್ಕಿ ಪೊಲೀಸ್ ಠಾಣಾ ಸರಹದ್ದಿನ ದಾಮಸಕಟ್ಟೆ ನಿವಾಸಿಗಳಾದ ಬೆನ್ಡ್ಡಿಕ್ ಪೆರ್ನಾಂಡಿಸ್ (84 ) ಹಾಗೂ ಲಿಲ್ಲಿ ಸಿಸಿಲಿಯ ಫೆರ್ನಾಂಡಿಸ್ (71 ) ಅಪರಿಚಿತರು ಉತ್ತರ ಪ್ರದೇಶದ ಸಿ.ಐ.ಡಿ ಪೊಲೀಸ್ ಎಂಬ ಸೊಗಿನಲ್ಲಿ ಮೊಬೈಲ್ ಫೋನ್ ವಾಟ್ಸ್ ಅಪ್ ಮೂಲಕ ಸಂಪರ್ಕಿಸಿ, ಅವರುಗಳು 6 ಕೋಟಿ ಮೋಸ ಮಾಡಿದಾಗಿ ಅವರ ವಿರುದ್ದ ವಂಚನೆ ಪ್ರಕರಣ ದಾಖಲಾಗಿರುವುದಾಗಿ ನಂಬಿಸಿ, ಸೈಬರ್ ಕಳ್ಳರು ಡಿಜಿಟಲ್ ಅರೆಸ್ಟ್ಗೆ ಒಳಪಡಿಸಿದ್ದರು.
    ತಮ್ಮ ಖಾತೆಯಲ್ಲಿರುವ ಹಣವನ್ನು ತನಿಖೆಗಾಗಿ ವರ್ಗಾಹಿಸಬೇಕೆಂದು ನಕಲಿ ಅಧಿಕಾರಿಗಳು ಸೂಚಿಸಿದಾಗ ವೃದ್ಧದ ದಂಪತಿಗಳು ಕಿನ್ನಿಗೋಳಿಯ ಕೆನರಾ ಬ್ಯಾಂಕಿನಲ್ಲಿದ್ದ ಅವರ ಬಾಬ್ತು ಖಾತೆಯಿಂದ ಸುಮಾರು 84 ಲಕ್ಷ ರೂಪಾಯಿ ಹಣವನ್ನು ಸೈಬರ್ ಕಳ್ಳರು ಸೂಚಿಸಿದ ಬ್ಯಾಂಕ್ ಖಾತೆಗೆ ರವಾನಿಸಲು ತಮ್ಮ ಕಿನ್ನಿಗೋಳಿ ಬ್ಯಾಂಕಿಗೆ ತೆರಳಿದರು.
    ಈ ಸಂದರ್ಭ ಕಿನ್ನಿಗೋಳಿಯ ಕೆನರಾ ಬ್ಯಾಂಕಿನ ಮ್ಯಾನೇಜರ್ ರಾಯಸ್ಟನ್ ಅವರು ದೊಡ್ಡ ಮೊತ್ತದ ಹಣವನ್ನು ಯಾಕೆ ವರ್ಗಾವಣೆ ಮಾಡುತ್ತಿರುವ ಬಗ್ಗೆ ವಿಚಾರಿಸಿದರು.
    ವೃದ್ದದಂಪತಿಗಳು ಸರಿಯಾದ ಉತ್ತರ ನೀಡದ ಕಾರಣ ಸಂಶಯಗೊಂಡು, ಸೈಬರ್ ವಂಚಕರು ಒದಗಿಸಿದಂತಹ ಖಾತೆಗೆ ಹಣವನ್ನು ವರ್ಗಾವಣೆ ಮಾಡದೇ, ಬ್ಯಾಂಕ್ ಮ್ಯಾನೇಜರ ರವರು ಕಿನ್ನಿಗೋಳಿ ಪರಿಸರದ ಬೀಟ್ ಸಿಬ್ಬಂದಿ ಯಶವಂತ ಕುಮಾರ ಹಾಗೂ ಠಾಣಾ ಗುಪ್ತವಾರ್ತೆ ಸಿಬ್ಬಂದಿ ಕಿಶೋರ ರವರಿಗೆ ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದರು.

ಕೂಡಲೇ ಕಾರ್ಯಪ್ರವೃತ್ತರಾದ ಮುಲ್ಕಿ ಪೊಲೀಸರು ವೃದ್ದ ದಂಪತಿಗಳ ಮನೆಗೆ ತೆರಳಿ ಅವರ ಮೊಬೈಲ್ ಪರಿಶೀಲಿಸಿದ್ದು ಈ ಸಮಯ ಅವರು ಡಿಜಿಟಲ್ ಅರೆಸ್ಟ್ಗೆ ಒಳಗಾಗಿರುವುದು ಕಂಡುಬಂತು.
ಕೂಡಲೇ ಪೊಲೀಸ್ ಸಿಬ್ಬಂದಿ ಬ್ಯಾಂಕ್ ಮ್ಯಾನೇಜರ ರವರಿಗೆ ಕರೆ ಮಾಡಿ ವಿಚಾರ ತಿಳಿಸಿ ಹಣ ವರ್ಗಾವಣೆ ಮಾಡದಂತೆ ಸೂಚಿಸಿದರು.‌
ವೃದ್ದ ದಂಪತಿಗಳಿಗೆ ತಿಳುವಳಿಕೆ ನೀಡಿದ ಮೆನೇಜರ್, ಅವರ ಜೀವನದ ಬಹುಮೂಲ್ಯ ಆದಾಯವನ್ನು ಉಳಿಸಿದರು. ಇದರ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯವರು ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Most Popular

Exit mobile version